ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರನ ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಚಂಡೀಗಡ: ಪಂಜಾಬ್‌ನ ಜಲಂಧರ್ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಲ್ ಅವರನ್ನು ನಾಲ್ವರು ದುಷ್ಕರ್ಮಿಗಳು ಸೋಮವಾರ ಸಂಜೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಹಕೋಟ್‌ನ ಮಲ್ಲಿಯನ್ ಕಲಾನ್ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಜಲಂಧರ್ (ಗ್ರಾಮೀಣ) ಪೊಲೀಸ್ ಉಪ ಅಧೀಕ್ಷಕ (ನಾಕೋದರ್) ಲಖ್ವಿಂದರ್ ಸಿಂಗ್ ಅವರು 40 ವರ್ಷದ ಆಟಗಾರ ಇಲ್ಲಿನ ಶಹಕೋಟ್‌ನ ನಂಗಲ್ ಅಂಬಿಯಾನ್ ಗ್ರಾಮದವರು ಎಂದು ಹೇಳಿದ್ದಾರೆ.
ಅವರು ತಮ್ಮ ಕುಟುಂಬದೊಂದಿಗೆ ಇಂಗ್ಲೆಂಡಿಲ್ಲಿ ನೆಲೆಸಿದ್ದರು. ಸಂದೀಪ್ ಅವರು ಕಬಡ್ಡಿ ಪಂದ್ಯಾವಳಿಗಳನ್ನು ಇಲ್ಲಿ ಆಯೋಜಿಸುತ್ತಿದ್ದರು. ಸಂದೀಪ್ ಪಂದ್ಯಾವಳಿ ಸ್ಥಳದಿಂದ ಹೊರಬಂದಾಗ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಬಡ್ಡಿ ಆಟಗಾರನ ಮೇಲೆ ಎಂಟರಿಂದ 10 ಬುಲೆಟ್‌ಗಳನ್ನು ಹಾರಿಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳದಲ್ಲಿ 10 ಖಾಲಿ ಬುಲೆಟ್ ಶೆಲ್‌ಗಳು ಪತ್ತೆಯಾಗಿವೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಸಂದೀಪಗೆ ಗುಂಡು ತಗುಲಿದ ನಂತರ, ಅವರನ್ನು ನಾಕೋಡರ್‌ನ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಭಾರತದ ವಾಯುದಾಳಿಗೆ ಪಾಕಿಸ್ತಾನ ಸೇನೆ ತತ್ತರ : ನೂರ್ ಖಾನ್ ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್‌ ನಲ್ಲಿ ಅಡಗಿದ ಪಾಕ್‌ ಸೇನಾ ಮುಖ್ಯಸ್ಥ..?!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement