ನವಾಬ್ ಮಲಿಕ್‌ ಮನವಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್, ನ್ಯಾಯಾಂಗ ಬಂಧನ ಮುಂದುವರಿಕೆ

ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಭೂಗತ ದೊರೆ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸಂಪುಟ ಸಚಿವ ನವಾಬ್ ಮಲಿಕ್ ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಪ್ರಸನ್ನ ಬಿ ವರಾಲೆ ಮತ್ತು ಶ್ರೀರಾಮ ಎಂ. ಮೋದಕ್ ಅವರ ಪೀಠವು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಮಲಿಕ್ ಅವರನ್ನು ಬಿಡುಗಡೆ ಮಾಡುವಂತೆ ಕೋರಿ ಹೇಬಿಯಸ್ ಕಾರ್ಪಸ್ ಅರ್ಜಿಯಲ್ಲಿ ಮಧ್ಯಂತರ ಮನವಿ ಬಗ್ಗೆ ತೀರ್ಪು ನೀಡಿತು.

ಈ ವಿಚಾರವನ್ನು ಸುದೀರ್ಘವಾಗಿ ಆಲಿಸಬೇಕಾಗಿದೆ. ನಿಗದಿಪಡಿಸಿದ ಆಧಾರಗಳನ್ನು ಪರಿಗಣಿಸಿ, ಮಧ್ಯಂತರ ಅರ್ಜಿಯಲ್ಲಿ ಪರಿಹಾರ ನೀಡಲು ನಾವು ಒಲವು ತೋರುತ್ತಿಲ್ಲ” ಎಂದು ನ್ಯಾಯಾಲಯ ಹೇಳಿತು.
ತಮ್ಮ ವಿರುದ್ಧ ಸಲ್ಲಿಸಲಾಗಿರುವ ಜಾರಿ ಪ್ರಕರಣ ಮಾಹಿತಿ ವರದಿ (ಇಸಿಐಆರ್) ಹಾಗೂ ತಮ್ಮ ಬಂಧನ ಅಕ್ರಮ. ಇಂತಹ ಕಾನೂನು ಬಾಹಿರ ಕ್ರಮದಿಂದಾಗಿ ತಮ್ಮ ಸತತ ಬಂಧನ ಅಕ್ರಮ ಮತ್ತ ಅಧಿಕಾರ ವ್ಯಾಪ್ತಿಯನ್ನು ಮೀರುತ್ತದೆ. ಆದ್ದರಿಂದ ತಾನು ಸಲ್ಲಿಸಿರುವ ಹೇಬಿಯಸ್‌ ಕಾರ್ಪಸ್‌ ರಿಟ್‌ ಅರ್ಜಿ ಪುರಸ್ಕಾರಾರ್ಹ ಮತ್ತು ತಾನು ಬಿಡುಗಡೆಗೆ ಅರ್ಹ” ಎಂದು ಕಾನೂನು ಸಂಸ್ಥೆ ರಶ್ಮಿಕಾಂತ್ ಅಂಡ್‌ ಪಾರ್ಟ್‌ನರ್ಸ್‌ ಮೂಲಕ ಸಲ್ಲಿಸಲಾದ ಮನವಿಯಲ್ಲಿ ಮಲಿಕ್‌ ವಾದಿಸಿದ್ದರು. ಮಾ. 11ರಂದು ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಇಂದು ಮಲಿಕ್‌ ಅವರಿಗೆ ಮಧ್ಯಂತರ ಪರಿಹಾರ ನಿರಾಕರಿಸಿ ಆದೇಶ ಹೊರಡಿಸಿದೆ.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement