ಹಿಜಾಬ್‌ ಕುರಿತು ಹೈಕೋರ್ಟ್ ತೀರ್ಪು: ಭಟ್ಕಳದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿದ ಮುಸ್ಲಿಂ ವರ್ತಕರು

ಕಾರವಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ನಿರ್ಬಂಧಿಸಿ‌ ಸಮವಸ್ತ್ರ ಸಂಹಿತೆ ಪಾಲಿಸಬೇಕೆಂಬ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದ ನಂತರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಮುಸ್ಲಿಂ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕ ಹೈಕೋರ್ಟ್‌ ತ್ರಿಸದಸ್ಯ ಪೀಠ ಇಂದು, ಮಂಗಳವಾರ (ಮಾರ್ಚ್ 15) ಹಿಜಾಬ್‌ ಕುರಿತು ತೀರ್ಪು ಪ್ರಕಟಿಸಿದ್ದು, ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದೆ ಹಾಗೂ ಸರ್ಕಾರದ ವಸ್ತ್ರ ಸಂಹಿತೆ ಕಾನೂನು ಬದ್ಧ. ಸರ್ಕಾರದ ವಸ್ತ್ರ ಸಂಹಿತೆಯನ್ನ ಪ್ರಶ್ನೆ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ.
ಈ ತೀರ್ಪಿನಿಂದ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೂ ಮತ್ತೆ ಕೆಲವರು ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಹೈಕೋರ್ಟ್ ತೀರ್ಪು ನೀಡಿದ ನಂತರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೆಲ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ನಗರದ ಪ್ರಮುಖ ರಸ್ತೆಯಲ್ಲಿರುವ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದಾರೆ. ಹಳೆ ಬಸ್ ನಿಲ್ದಾಣದಿಂದ ಚೌಕ್ ಬಜಾರ್ ವರೆಗೆ ಇರುವ ಬಹುತೇಕ ಮುಸ್ಲಿಂ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಹಾಗೂ ತಂಜಿಂ ಈ ಕುರಿತು ಸಭೆ ನಡೆಸುತ್ತದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement