ಹಿಜಾಬ್‌: ಹೈಕೋರ್ಟ್ ಆದೇಶ ಎಲ್ಲರೂ ಪಾಲಿಸಬೇಕು-ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಬೆಂಗಳೂರು: ಹಿಜಾಬ್ ವಿವಾದ ಕುರಿತ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರು ಗೌರವಿಸಬೇಕು, ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಕ್ಷಣ ಬಹಳ ಮುಖ್ಯ ಯಾವುದೇ ಕಾರಣಕ್ಕೆ ವಿದ್ಯಾಭ್ಯಾಸ ಹಾಳು ಮಾಡಿಕೊಳ್ಳಬೇಡಿ. ಪರೀಕ್ಷೆಗಳನ್ನು ಬರೆಯಿರಿ, ಶಾಲಾ-ಕಾಲೇಜುಗಳಿಂದ ದೂರ ಉಳಿಯಬೇಡಿ ಎಂದು ಬೊಮ್ಮಾಯಿ ಮನವಿ ಮಾಡಿದ್ದಾರೆ.

ಮಕ್ಕಳ ಶಿಕ್ಷಣದ ಪ್ರಜ್ಞೆ ಇದೆ. ಮಕ್ಕಳಿಗೆ ಶಿಕ್ಷಣಕ್ಕಿಂತ ಬೇರೆ ಯಾವುದು ಇಲ್ಲ. ಇದನ್ನ ಮಕ್ಕಳು ಪಾಲಿಸಬೇಕು. ಇದನ್ನ ಅನುಷ್ಠಾನಕ್ಕೆ ತರುವ ಸಂದರ್ಭದಲ್ಲಿ ಎಲ್ಲರೂ ಸಹಕರಿಸಬೇಕು. ಶಾಂತಿ ಸುವ್ಯವಸ್ಥೆ ಬಹಳ ಮುಖ್ಯ. ನಾನು ಎಲ್ಲಾ ಸಮುದಾಯದ ನಾಯಕರಿಗೆ ಶಿಕ್ಷಕರಿಗೆ ಪೋಷಕರಿಗೆ ಮಕ್ಕಳಿಗೆ ಮನವಿ ಮಾಡುತ್ತೇನೆ. ಎಲ್ಲರೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಹಕರಿಸಬೇಕು. ಎಲ್ಲಾ ಪರೀಕ್ಷೆಗಳಿಗೂ ಭಾಗವಹಿಸಬೇಕು. ಶಿಕ್ಷಣ ಬಹಳ ಮುಖ್ಯ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ದೇವೇಗೌಡರ ಜೊತೆ ತೆಲಂಗಾಣ ಸಿಎಂ ಕೆಸಿಆರ್‌ ಮಾತುಕತೆ: 3 ತಿಂಗಳು ಕಾಯಿರಿ, ದೇಶದಲ್ಲಿ ಬಹುದೊಡ್ಡ ಬದಲಾವಣೆಯಾಗುತ್ತೆ-ಕೆಸಿಆರ್‌
advertisement

ನಿಮ್ಮ ಕಾಮೆಂಟ್ ಬರೆಯಿರಿ