ಚುನಾವಣಾ ಸೋಲಿನ ನಂತರ ಐದು ರಾಜ್ಯಗಳ ಕಾಂಗ್ರೆಸ್ ಮುಖ್ಯಸ್ಥರಿಗೆ ರಾಜೀನಾಮೆಗೆ ಸೂಚಿಸಿದ ಸೋನಿಯಾ ಗಾಂಧಿ

ನವದೆಹಲಿ: ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ರಾಜ್ಯ ಚುನಾವಣೆಯಲ್ಲಿ ಸೋಲಿನ ನಂತರ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚುನಾವಣೆ ನಡೆದ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳ ಮುಖ್ಯಸ್ಥರಿಗೆ ತಮ್ಮ ಸ್ಥಾನದಿಂದ ಕೆಳಗಿಳಿಯುವಂತೆ ಸೂಚಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ, ಸೋನಿಯಾ ಗಾಂಧಿ ಅವರು, ಪ್ರದೇಶ ಕಾಂಗ್ರೆಸ್‌ ಸಮಿತಿಗಳ ಮರುಸಂಘಟನೆಗೆ ಅನುಕೂಲವಾಗುವಂತೆ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದ ಪಿಸಿಸಿ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಹೇಳಿದ್ದಾರೆ ಎಂದು ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

ಅಜಯ್ ಕುಮಾರ್ ಲಲ್ಲು (ಉತ್ತರ ಪ್ರದೇಶ), ಗಣೇಶ್ ಗೋಡಿಯಾಲ್ (ಉತ್ತರಾಖಂಡ), ನವಜೋತ್ ಸಿಂಗ್ ಸಿಧು (ಪಂಜಾಬ್), ಗಿರೀಶ್ ಚೋಡಂಕರ್ (ಗೋವಾ) ಮತ್ತು ನಮೀರಕ್‌ಪಂ ಲೋಕೆನ್ ಸಿಂಗ್ (ಮಣಿಪುರ) ತಮ್ಮ ತಮ್ಮ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಪ್ರಚಾರವನ್ನು ನಡೆಸಿದರು.
ಕಾಂಗ್ರೆಸ್ ವರ್ಕಿಂಗ್ ಕಮಿಟಿ (ಸಿಡಬ್ಲ್ಯುಸಿ) ವಿಧಾನಸಭೆ ಚುನಾವಣೆಯಲ್ಲಿ ಹಳೆಯ ಪಕ್ಷದ ಸೋಲಿಗೆ ಕಾರಣಗಳನ್ನು ಎಳೆಎಳೆಯಾಗಿ ಚರ್ಚಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ಸಿಡಬ್ಲ್ಯುಸಿ, ಅದರ ಮ್ಯಾರಥಾನ್ ಸಭೆಯಲ್ಲಿ, ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಅಗತ್ಯ ಬದಲಾವಣೆಗಳನ್ನು ತರಲು ಕಾಂಗ್ರೆಸ್ ಅಧ್ಯಕ್ಷರನ್ನು ಕೇಳಿದೆ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುವ ವರೆಗೆ ಅಂದರೆ ಕನಿಷ್ಠ ಆಗಸ್ಟ್-ಸೆಪ್ಟೆಂಬರ್ ವರೆಗೆ ಸೋನಿಯಾ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಅದು ನಿರ್ಧರಿಸಿದೆ.

ಪ್ರಮುಖ ಸುದ್ದಿ :-   ಕೋಲ್ಕತ್ತಾ ವಶಪಡಿಸಿಕೊಳ್ಳಲು ಆತ್ಮಹತ್ಯಾ ಬಾಂಬರ್‌ಗಳನ್ನು ಕಳುಹಿಸ್ತೇನೆ ': ಬಾಂಗ್ಲಾದೇಶ ಮೂಲಭೂತವಾದಿಯಿಂದ ಹಿಂದೂಗಳ ವಿರುದ್ಧ ಬೆದರಿಕೆ ವೀಡಿಯೊ ವೈರಲ್‌

ಇತ್ತೀಚೆಗಷ್ಟೇ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದಿಂದ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದರೆ, ರಾಜಕೀಯವಾಗಿ ನಿರ್ಣಾಯಕ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಪರಾಭವಗೊಂಡಿತು. ಉತ್ತರಾಖಂಡ, ಮಣಿಪುರ ಮತ್ತು ಗೋವಾದಲ್ಲಿ ಬಿಜೆಪಿಯಿಂದ ಸಮಗ್ರವಾಗಿ ಸೋಲಿಸಲ್ಪಟ್ಟು ಹಳೆಯ ಪಕ್ಷವು ಬಹುಮತವನ್ನು ಪಡೆಯಲು ವಿಫಲವಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement