ಸರ್ಕಾರ ಕೋರ್ಟ್ ಮೇಲೆ ಒತ್ತಡ ಹಾಕಿದೆ, ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗಲ್ಲ; ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರು

ಉಡುಪಿ: ನಾವು ನಮ್ಮ ಕುರಾನ್ ಅನುಸರಣೆ ಮಾಡುತ್ತೇವೆ. ನಾವು ಸರ್ಕಾರದ ಆದೇಶ ಅನುಸರಿಸಬೇಕಾಗಿಲ್ಲ. ನಮಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ತರಗತಿಗಳಲ್ಲಿ ಹಿಜಾಬ್ ನಿರ್ಬಂಧದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿಯ ಐವರು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಹೈಕೋರ್ಟ್‌ ತೀರ್ಪಿನ ನಂತರ ಇಂದು, ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐವರು ವಿದ್ಯಾರ್ಥಿನಿಯರು ಹೈಕೋರ್ಟ್‌ ತೀರ್ಪಿನ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಹಿಜಾಬ್ ತೆಗೆಯುವುದಿಲ್ಲ. ಶಾಲೆಗಳಲ್ಲಿ ನಮಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು. ನಾವು ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗುವುದಿಲ್ಲ. ಪರೀಕ್ಷೆ ಬರೆಯಲು ಸಿದ್ಧರಿದ್ದೇವೆ. ಆದರೆ ಹಿಜಾಬ್ ತೆಗೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.
ನಮ್ಮ ಸಂವಿಧಾನ ಹಕ್ಕಿಗಾಗಿ ಮುಂದಿನ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇತ್ತು. ಆದರೆ ನಮಗೆ ತೀರ್ಪಿನಿಂದ ನಿರಾಸೆಯಾಗಿದೆ. ನಾವು ಹಿಜಾಬ್ ತೆಗೆದು ತರಗತಿ ಒಳಗೆ ಹೋಗುವುದಿಲ್ಲ. ಇದಕ್ಕೆ ನಾವು ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಕುರಾನ್ ನಲ್ಲಿ ದೇಹವನ್ನು ಮುಚ್ಚಬೇಕೆಂಬ ಉಲ್ಲೇಖವಿದೆ. ಹಿಜಾಬ್ ಅವಶ್ಯಕತೆ ಇಲ್ಲದಿದ್ದರೆ ನಾವು ಹಿಜಾಬ್ ಗಾಗಿ ಹೋರಾಟ ಮಾಡುತ್ತಿರಲಿಲ್ಲ. . ಆದರೆ ನಮಗೆ ನ್ಯಾಯ ಸಿಕ್ಕಿಲ್ಲ. ನಮ್ಮ ಹಕ್ಕು ನಮಗೆ ಸಿಕ್ಕಿಲ್ಲ. ನಾವು ಕಾನೂನು ರೀತಿಯಲ್ಲಿ ಎಲ್ಲಾ ಪ್ರಯತ್ನ ಮಾಡುತ್ತೇವೆ. ನಾವು ಹಿಜಾಬ್ ತೆಗೆಯುವುದಿಲ್ಲ. ನಮಗೆ ಹಿಜಾಬ್ ಬೇಕೆಂಬ ಕಾರಣಕ್ಕೆ ನಾವು ಹೈಕೋರ್ಟ್ ಮೆಟ್ಟಿಲೇರಿದ್ದೇವೆ. ಹೈಕೋರ್ಟ್ ತೀರ್ಪು ನಮ್ಮ ಪರವಾಗಿ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಹಿಜಾಬ್ ವಿಚಾರವನ್ನು ರಾಜಕೀಯ ಲಾಭಕ್ಕೆ ಕೋಮುವಾದಿ ಬಣ್ಣ ನೀಡಲಾಗಿದೆ. ರಾಜಕೀಯವಾಗಿ ಬಳಸಿಕೊಳ್ಳಲು ದೊಡ್ಡ ವಿಷಯವನ್ನಾಗಿ ಮಾಡಿದರು. ನಮಗೆ ನಮ್ಮ ಧರ್ಮ ಮತ್ತು ಶಿಕ್ಷಣ ಎರಡೂ ಬಹಳ ಮುಖ್ಯ. ನಮಗೆ ಎರಡೂ ಅವಕಾಶ ಬೇಕು ಎಂದು ಅವರು ಹೇಳಿದ್ದಾರೆ.
ಸರ್ಕಾರ ಮಧ್ಯಂತರ ಆದೇಶದ ಮೂಲಕ ಕೋರ್ಟ್ ಮೇಲೆ ಒತ್ತಡ ಹಾಕಿದೆ. ಕೋರ್ಟ್ ತೀರ್ಪಿನ ಮೇಲೆ ಹಸ್ತಕ್ಷೇಪ ಮಾಡಿದೆ. ರಾಜ್ಯ ಸರ್ಕಾರದಿಂದ ಕೋರ್ಟ್ ಮೇಲೆ ಒತ್ತಡ ಇದ್ದುದರಿಂದ ಹಿಜಾಬ್ ವಿರುದ್ಧ ತೀರ್ಪು ಬಂದಿದೆ. ನಾವು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ, ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.
ನಮ್ಮ ಮುಂದಿನ ನಡೆಯ ಬಗ್ಗೆ ನಮ್ಮ ವಕೀಲರ ಜೊತೆ ಚರ್ಚೆ ಮಾಡುತ್ತಿದ್ದೇವೆ. ನಾವು ಸದ್ಯ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ.ಎಂದು ವಿದ್ಯಾರ್ಥಿನಿಯರು ಹೇಳಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement