ಏಕಕಾಲಕ್ಕೆ ಕರ್ನಾಟಕದ 78 ಕಡೆಗಳಲ್ಲಿ 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಎಸಿಬಿ ದಾಳಿ

ಬೆಳ್ಳಂಬೆಳಗ್ಗೆ 75 ಕಡೆಗಳಲ್ಲಿ ಎಸಿಬಿ ದಾಳಿ ಮಾಡಿರುವ 18 ಸರ್ಕಾರಿ ಅಧಿಕಾರಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಕರ್ನಾಟಕದ 78 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೂರು ಸ್ಥಳಗಳು ಸೇರಿ ರಾಜ್ಯದ 78 ಸ್ಥಳಗಳಲ್ಲಿ ಎಸಿಬಿ ದಾಳಿ ನಡೆಸಿದೆ. 18 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 78 ಸ್ಥಳಗಳಲ್ಲಿ, ಏಕಕಾಲಕ್ಕೆ 200ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದ್ದು, ದಾಖಲಾತಿಗಳನ್ನು ಪರಿಶೀಲಿಸಲಾಗುತ್ತಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
100 ಅಧಿಕಾರಿಗಳು ಹಾಗೂ 300 ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ.

1. ಜ್ಞಾನೇಂದ್ರ ಕುಮಾರ್- ಹೆಚ್ಚುವರಿ ಆಯುಕ್ತರು ಸಾರಿಗೆ, ಟ್ರಾಡ್ ಸಾರಿಗೆ ಮತ್ತು ಸುರಕ್ಷತೆ, ಬೆಂಗಳೂರು
2. ರಾಕೇಶ್ ಕುಮಾರ್- ಬಿಡಿಎ, ಪಟ್ಟಣ ಯೋಜನೆ
3. ರಮೇಶ ಕಣಕಟ್ಟೆ- ಆರದ.ಎಫ್.ಓ., ಸಾಮಾಜಿಕ ಅರಣ್ಯ, ಯಾದಗಿರಿ
4. ಬಸವರಾಜ ಶೇಖರ ರೆಡ್ಡಿ ಪಾಟೀಲ್- ಕಾರ್ಯನಿರ್ವಾಹಕ ಅಭಿಯಂತರ, ಕೌಜಲಗಿ ವಿಭಾಗ, ಗೋಕಾಕ
5. ಬಸವ ಕುಮಾರ್ ಎಸ್ ಅಣ್ಣಿಗೇರಿ – ಶಿರಸ್ತೇದಾರ್, ಡಿಸಿ ಕಚೇರಿ, ಗದಗ
6. ಗೋಪಿನಾಥ್ ಸಾ ಎನ್ ಮಾಳಗಿ- ಪ್ರಾಜೆಕ್ಟ್ ಮ್ಯಾನೇಜರ್, ನಿರ್ಮಿತಿ ಕೇಂದ್ರ, ವಿಜಯಪುರ
7. ಬಿ ಕೆ ಶಿವಕುಮಾರ್- ಹೆಚ್ಚುವರಿ ಡಿಟೆಕ್ಟರ್, ಇಂಡಸ್ಟ್ರಿವ್ಸ್ ಮತ್ತು ಕಾಮರ್ಸ್, ಬೆಂಗಳೂರು
8. ಶಿವಾನಂದ್ ಪಿ ಶರಣಪ್ಪ ಖೇಡಗಿ- ಆರ್​ಎಫ್​ಒ, ಬಾದಾಮಿ
9. ಮಂಜುನಾಥ್- ಸಹಾಯಕ ಆಯುಕ್ತ, ರಾಮನಗರ
10. ಶ್ರೀನಿವಾಸ್- ಜನರಲ್ ಮ್ಯಾನೇಜರ್, ಸಮಾಜ ಕಲ್ಯಾಣ ಇಲಾಖೆ
11. ಮಹೇಶ್ವರಪ್ಪ- ಜಿಲ್ಲಾ ಪರಿಸರ ಅಧಿಕಾರಿ, ದಾವಣಗೆರೆ
12. ಕೃಷ್ಣನ್- ಎಇ, ಎಪಿಎಂಸಿ, ಹಾವೇರಿ
13. ಚಲುವರಾಜ್- ಅಬಕಾರಿ ನಿರೀಕ್ಷಕರು, ಗುಂಡ್ಲುಪೇಟೆ ತಾಲೂಕು
14. ಗಿರೀಶ್- ಸಹಾಯಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ವಿಭಾಗ
15. ಬಾಲಕೃಷ್ಣ ಹೆಚ್ ಎನ್- ಪೊಲೀಸ್ ಇನ್ಸ್​ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ, ಮೈಸೂರು
16. ಗವಿರಂಗಪ್ಪ- ಎಇಇ, ಪಿಡಬ್ಲ್ಯೂಡಿ, ಚಿಕ್ಕಮಗಳೂರು
17. ಅಶೋಕ್ ರೆಡ್ಡಿ ಪಾಟೀಲ್- ಎಇಇ, ಕೃಷ್ಣ ಭಾಗ್ಯ ಜಲ ನಿಗಮ ಲಿ, ದೇವದುರ್ಗ, ರಾಯಚೂರು
18. ದಯಾ ಸುಂದರ್ ರಾಜು- ಎಇಇ, ಕೆಪಿಟಿಚಿಎಲ್​, ದಕ್ಷಿಣ ಕನ್ನಡ
ಈ ಅಧಿಕಾರಿಗಳ ಮನೆಗಳು ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement