ಚುನಾವಣಾ ರಾಜಕೀಯದ ಮೇಲೆ ಮೇಲೆ ಫೇಸ್‌ಬುಕ್, ಟ್ವಿಟ್ಟರ್‌ನಂತಹ ಸಾಮಾಜಿಕ ಮಾಧ್ಯಮಗಳ ಹಸ್ತಕ್ಷೇಪ ಕೊನೆಗಾಣಿಸಿ’: ಲೋಕಸಭೆಯಲ್ಲಿ ಸೋನಿಯಾ ಗಾಂಧಿ ಒತ್ತಾಯ

ನವದೆಹಲಿ: ದೇಶದಲ್ಲಿ ಚುನಾವಣಾ ರಾಜಕೀಯದ ಮೇಲೆ ಫೇಸ್‌ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಪ್ರಭಾವ ಕೊನೆಗೊಳಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಭಾರತೀಯ ಜನತಾ ಪಕ್ಷದ ಹೆಸರನ್ನು ಹೇಳದೆ, ಆಡಳಿತ ಮಂಡಳಿಯ ಕುತಂತ್ರದಿಂದಾಗಿ ಫೇಸ್‌ಬುಕ್‌ನಿಂದ ಸಾಮಾಜಿಕ ಸಾಮರಸ್ಯ ಹಾಳಾಗುತ್ತಿದೆ ಎಂದು ಆರೋಪಿಸಿದರು.

ದೇಶದ ಪ್ರಜಾಪ್ರಭುತ್ವವನ್ನು ನಾಶ ಮಾಡಲು ಸಾಮಾಜಿಕ ಮಾಧ್ಯಮ ದುರುಪಯೋಗಪಡಿಸಿಕೊಳ್ಳುವ ಅಪಾಯ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ದೇಶದ ಪ್ರಮುಖ ಸಮಸ್ಯೆ ಬಗ್ಗೆ ಮಾತನಾಡಲು ನನಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದಗಳು. ಫೇಸ್‌ಬುಕ್‌ ಮತ್ತು ಟ್ವಿಟರ್ ನಂತಹ ಜಾಗತಿಕ ಕಂಪನಿಗಳ ಸಾಮಾಜಿಮಕ ಮಾಧ್ಯಮಗಳು ಪಕ್ಷಗಳು ಮತ್ತು ಅವರ ಪ್ರಾಕ್ಸಿಗಳಿಂದ ರಾಜಕೀಯ ನಿರೂಪಣೆಗಳನ್ನು ರೂಪಿಸಲು ಹೆಚ್ಚಾಗಿ ಬಳಸಲ್ಪಡುತ್ತವೆ ಎಂದು ಹೇಳಿದರು.

ಜಾಗತಿಕ ಸಾಮಾಜಿಕ ಮಾಧ್ಯಮ ಕಂಪನಿಗಳು ಎಲ್ಲಾ ಪಕ್ಷಗಳಿಗೆ ಸಮನಾದ ವೇದಿಕೆ ಕಲ್ಪಿಸುತ್ತಿಲ್ಲ ಎಂಬುದು ಸಾರ್ವಜನಿಕರ ಗಮನಕ್ಕೆ ಪದೇ ಪದೇ ಬಂದಿದೆ. ಆಡಳಿತದ ಸಹಯೋಗದೊಂದಿಗೆ ಫೇಸ್‌ಬುಕ್‌ ಸಾಮಾಜಿಕ ಸಾಮರಸ್ಯ ಕದಡುತ್ತಿರುವ ಅಬ್ಬರದ ರೀತಿ ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಚುನಾವಣಾ ರಾಜಕೀಯದಲ್ಲಿ ಫೇಸ್‌ಬುಕ್‌ ಮತ್ತು ಇತರ ಸಾಮಾಜಿಕ ಮಾಧ್ಯಮ ದೈತ್ಯರ ವ್ಯವಸ್ಥಿತ ಪ್ರಭಾವ ಮತ್ತು ಹಸ್ತಕ್ಷೇಪವನ್ನು ಕೊನೆಗೊಳಿಸಲು ಸರ್ಕಾರವನ್ನು ಒತ್ತಾಯಿಸಿದ ಅವರು, ಇದು ಪಕ್ಷ ಮತ್ತು ರಾಜಕೀಯವನ್ನು ಮೀರಿದ ವಿಷಯವಾಗಿದೆ. ಯಾರೇ ಅಧಿಕಾರದಲ್ಲಿದ್ದರೂ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾವು ರಕ್ಷಿಸಬೇಕಾಗಿದೆ ಫೇಸ್ ಬುಕ್ ನಂತಹ ಪ್ರಾಕ್ಸಿ ಜಾಹೀರಾತು ಕಂಪನಿಗಳಿಗೂ ಅದರ ಬಗ್ಗೆ ತಿಳಿದಿವೆ ಮತ್ತು ಅದರಿಂದ ಲಾಭ ಪಡೆಯುತ್ತಿವೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement