ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ನಿರಾಕರಣೆ: 9 ಮಂದಿ ಮನೆಗೆ ವಾಪಸ್

ಉಡುಪಿ: ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ಮಂದಿ ವಿದ್ಯಾರ್ಥಿನಿಯರಿಗೆ ಕಾಲೇಜು ಪರೀಕ್ಷೆಗೆ ಪ್ರವೇಶಿಸಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಒಂಬತ್ತು ವಿದ್ಯಾರ್ಥಿನಿಯರು ಮನೆಗೆ ಹಿಂತಿರುಗಿದ್ದಾರೆ ಎಂದು ವರದಿಯಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿರಿಸಿ ತರಗತಿಗೆ ತೆರಳಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ ಬಳಿಕವೂ ಬುಧವಾರ ಕಾಲೇಜಿಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸಿದ್ದರು.
ಆದರೆ ಪ್ರಾಂಶುಪಾಲರು ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಿಸಲು ಅನುಮತಿ ನೀಡಲಿಲ್ಲ. ಹಿಜಾಬ್ ತೆಗೆದಿರಿಸಿ ತರಗತಿಗೆ ಆಗಮಿಸಲು ಸೂಚನೆ ನೀಡಿದರೂ, ವಿದ್ಯಾರ್ಥಿನಿಯರು ಕೇಳಲಿಲ್ಲ. ಹಿಜಾಬ್ ನಮ್ಮ ಜೀವನದ ಅವಿಭಾಜ್ಯ ಅಂಗ. ಪರೀಕ್ಷೆ ಮತ್ತು ಹಿಜಾಬ್ ಎರಡೂ ಬೇಕು ಎಂದು ಪಟ್ಟು ಹಿಡಿದರು. ಆದರೆ ಕೋರ್ಟ್ ಆದೇಶವಿರುವುದರಿಂದ ಅವಕಾಶ ನೀಡದ ಕಾರಣ 11 ಮಂದಿಯ ಪೈಕಿ 9 ಮಂದಿ ತರಗತಿಗೆ ಹಾಜರಾಗದೆ ಮನೆಗೆ ಹಿಂತಿರುಗಿದರು. ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿರಿಸಿ ತರಗತಿಗೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement