ಮಲ್ಪೆಯಲ್ಲಿ ಹಿಜಾಬ್ ಪರ ಗೋಡೆ ಬರಹ

posted in: ರಾಜ್ಯ | 0

ಉಡುಪಿ: ಮಲ್ಪೆಯ ಬೈಲಕೆರೆ ಪರಿಸರದಲ್ಲಿ ಹಿಜಾಬ್ ಪರವಾಗಿ ಕಿಡಿಗೇಡಿಗಳು ಗೋಡೆಬರಹ ಬರೆದಿದ್ದಾರೆ. ನ್ಯಾಯಾಲಯ ಹಿಜಾಬ್ ವಿರುದ್ಧ ಆದೇಶ ನೀಡಿದ ಬೆನ್ನಲ್ಲೇ ಗೋಡೆ ಬರಹ ಬರೆಯಲಾಗಿದೆ.

ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಬರಹ ಕಂಡುಬಂದಿದೆ. “ಹಿಜಾಬ್ ಮೂವ್ ಮೆಂಟ್”, “ಹಿಜಾಬ್ ಈಸ್ ಅವರ್ ರೈಟ್” ಎಂಬ ಗೋಡೆ ಬರಹ ಪತ್ತೆಯಾಗಿದೆ. ಸ್ಥಳದಲ್ಲಿ ನೂರಾರು ಜನರು ಜಮಾಯಿಸಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವವರನ್ನು ಬಂಧಿಸುವಂತೆ ಆಗ್ರಹ ಮಾಡಿದ್ದಾರೆ.
ಸ್ಥಳಕ್ಕೆ ವೃತ್ತನಿರೀಕ್ಷಕ ಶರಣಬಸವ ಪಾಟೀಲ್ ಭೇಟಿ ನೀಡಿದ್ದಾರೆ.ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಡಿ.ಎಸ್. ನಾಗಭೂಷಣ ನಿಧನ
advertisement

ನಿಮ್ಮ ಕಾಮೆಂಟ್ ಬರೆಯಿರಿ