ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘನೆ ಪ್ರಕರಣಗಳಿಂದ ಕಳೆದ ಮೂರು ವರ್ಷದಲ್ಲಿ 660.97 ಕೋಟಿ ರೂ.ಗಳ ದಂಡ ಸಂಗ್ರಹಿಸಲಾಗಿದೆ…!
ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಈ ಮಾಹಿತಿ ನೀಡಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಪ್ರಕರಣಗಳಿಂದ ಸಂಗ್ರಹಿಸಲಾದ ಸ್ಥಳದಂಡ ಮೊತ್ತವನ್ನು ಸರ್ಕಾರದ ಖಜಾನೆಗೆ ನೇರವಾಗಿ ಜಮೆ ಮಾಡಲಾಗುತ್ತದೆ. ಸಂಚಾರ ಸುಧಾರಣೆಗಾಗಿ ಸರ್ಕಾರವು ಅನುದಾನವನ್ನು ಬಿಡುಗಡೆ ಮಾಡುತ್ತಿದ್ದು, ಕೆಲವು ಯೋಜನೆಯ ಉದ್ದೇಶಗಳಿಗಾಗಿ ಅನುದಾನ ಸದುಪಯೋಗಪಡಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
advertisement
9535127775 / 9901837775 / 6364528715 / 08362775155 / https://icsmpucollege.com/
ಸಿಗ್ನಲ್ ಲೈಟ್ಸ್, ಸಿ.ಸಿ, ಕ್ಯಾಮೆರಾ, ಹೆದ್ದಾರಿ ಗಸ್ತು ವಾಹನ, ಇಂಟರ್‌ಸೆಪ್ಟರ್ ವಾಹನ, ಪಿಡಿಎ ಡಿವೈಸ್‌ಗಳ ವಾರ್ಷಿಕ ನಿರ್ವಹಣೆಗಾಗಿ.
ಹೆದ್ದಾರಿ ಗಸ್ತು ವಾಹನ ಯೋಜನೆಯಡಿಯಲ್ಲಿ ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ಸಲುವಾಗಿ ಹೆದ್ದಾರಿ ಗಸ್ತು ವಾಹನಗಳನ್ನು ಖರೀದಿಸಲು ಬಳಸಲಾಗುತ್ತದೆ. ಅಲ್ಲದೆ, ಹೆದ್ದಾರಿಗಳಲ್ಲಿ/ಇನ್ನಿತರೆ ರಸ್ತೆಗಳಲ್ಲಿ ಅತಿ ವೇಗವಾಗಿ ವಾಹನಗಳನ್ನು ಚಲಾಯಿಸುವವರ ವಿರುದ್ಧ ಇಂಟರ್‌ಸೆಪ್ಟರ್ ವಾಹನಗಳ ಮೂಲಕ ಪ್ರಕರಣಗಳನ್ನು ದಾಖಲಿಸಲು ಈ ಹಣದಿಂದ ಇಂಟರ್‌ಸೆಪ್ಟರ್ ವಾಹನಗಳನ್ನು ಖರೀದಿಸಲಾಗುತ್ತದೆ. ಪಿ.ಡಿ.ಎ ಡಿವೈಸ್ ಮಷಿನ್‌ಗಳನ್ನು ಖರೀದಿಸಲು ಹಾಗೂ ಸಂಚಾರ ಉಪಕರಣಗಳನ್ನು ಖರೀದಿಸಲು ಹಾಗೂ ಸಂಚಾರ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮಗಳನ್ನು ಆಚರಿಸಲು ಬಳಸಲಾಗುತ್ತದೆ ಎಂದು ತಿಳಿಸಿದರು.
ಅಡಪ್ಟೀವ್/ಸಿಂಗ್ರನೈಸ್ ಸಿಗ್ನಲ್ ವಿತ್ ರೆಡ್ ಲೈಟ್ ವಯಲೇಷನ್ (RLVD) ಅನ್ನು ಅನುಷ್ಠಾನ, ಸಂಚಾರ ಸುಧಾರಣೆಗಾಗಿ ಸುಧಾರಿತ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ಬಳಕೆ, ಸರ್ವೋಚ್ಚ ನ್ಯಾಯಾಲಯದ ರಸ್ತೆ ಸುರಕ್ಷತಾ ಸಮಿತಿ, ಭಾರತ ಸರ್ಕಾರದ ರಸ್ತೆ ಸಾರಿಗೆ & ಹೆದ್ದಾರಿ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ನಿರ್ದೆಶನಗಳನ್ನು ಅನುಷ್ಠಾನಗೊಳಿಸಲು ದಂಡದ ಮೊತ್ತವನ್ನು ಬಳಸಲಾಗುತ್ತದೆ ಎಂದು ಹೇಳಿದರು.
2020-21ನೇ ಸಾಲಿನಲ್ಲಿ ಬಿಡುಗಡೆ ಮಾಡಲಾದ ಒಟ್ಟು ಅನುದಾನದಲ್ಲಿ ಬಾಕಿ ಉಳಿದಿರುವ ಅನುದಾನ 19,73,11,868 ರೂ.ಗಳನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸರ್ಕಾರದ ಆದೇಶ ಸಂಖ್ಯೆ:ಟಿಡಿ 137 ಟಿಡಿಓ 2020, ದಿನಾಂಕ: 08.03.2021ರ ಪ್ರಕಾರ ಕೆ.ಆರ್.ಡಿ.ಸಿ.ಎಲ್. ಸಂಸ್ಥೆಯಲ್ಲಿ ಠೇವಣಿಯನ್ನಾಗಿಟ್ಟು ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ