ಬೆಂಗಳೂರು: ಸದ್ಯದಲ್ಲೇ ಪುನೀತ್ ರಾಜ್‌ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಆರ್.ಟಿ.ನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಘೋಷಣೆ ಮಾಡಿದೆ. ಸದ್ಯದಲ್ಲೇ ಕುಟುಂಬದ ಜೊತೆಗೆ ಚರ್ಚಿಸಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಅವರ ಬದುಕು ಸ್ಪೂರ್ತಿ. ಅಂಗಾಂಗ ದಾನ ಮಾಡಿರುವುದು ನಮ್ಮೆಲ್ಲರಿಗೂ ಪ್ರೇರಣೆ. ಇಂದು ಅವರ ಜನ್ಮದಿನದಂದು ಅವರ ಜೇಮ್ಸ್ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ