ಅಪಘಾತಕ್ಕೀಡಾಗಿ ಹೊತ್ತಿ ಉರಿದ ಟಿಪ್ಪರ್, ಚಾಲಕ ಸಜೀವ ದಹನ

ಮಂಡ್ಯ : ಮದ್ದೂರು ಪಟ್ಟಣದಲ್ಲಿನ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಚಾಲಕನ ಸಮೇತ ಟಿಪ್ಪರ್​ ಲಾರಿ ಸುಟ್ಟು ಕರಕಲಾಗಿರುವ ಘಟನೆ ಗುರುವಾರ ಮಾ.17ರ ಬೆಳಿಗ್ಗೆ ನಡೆದಿದೆ.
ಮದ್ದೂರು ಪಟ್ಟಣದ ಬೆಂಗಳೂರು – ಮೈಸೂರು ಎಲ್ಐಸಿ ಕಚೇರಿ ಮುಂಭಾಗ ಘಟನೆ ನಡೆದಿದ್ದು, ಬಿಡದಿಯಿಂದ ಮೈಸೂರಿಗೆ ಜೆಲ್ಲಿ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಎಲ್‌ಐಸಿ ಕಚೇರಿ ಬಳಿ ಬರುತ್ತಿದ್ದಂತೆ ಪಂಚರ್ ಆಗಿ ಪಿಲ್ಲರಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಅಪಘಾತ ರಭಸಕ್ಕೆ ಟಿಪ್ಪರ್ ನಜ್ಜುಗುಜ್ಜಾಗಿದ್ದರಿಂದ ಚಾಲಕ ವಾಹನದೊಳಗೆ ಸಿಕ್ಕಿಹಾಕಿಕೊಂಡು ಟಿಪ್ಪರ್​ನಲ್ಲೇ ಸಜೀವ ದಹನವಾಗಿದ್ದಾನೆ. ಮೃತ ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಚಾಲಕನ ಶವ ಹೊರತೆಗೆಯಲಾಗಿದೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement