ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ ರಚನೆ ವೇತನ ಆಯೋಗ ರಚನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರಿ ನೌಕರರ ವೇತನಕ್ಕೆ ಸಮನಾಗಿ ರಾಜ್ಯ ಸರಕಾರಿ ನೌಕರರಿಗೆ ವೇತನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರಿ ನೌಕರರ ಸಮಾನ ವೇತನ ಆಯೋಗ ರಚನೆ ಮಾಡಲಾಗುತ್ತದೆ ಎಂದು ಹೇಳಿದರು.
ಈ ಬಗ್ಗೆ ಅಧ್ಯಯನ ನಡೆಸಿ, ಬೇರೆ ರಾಜ್ಯಗಳಲ್ಲಿನ ಪರಿಸ್ಥಿತಿ ನೋಡಿಕೊಂಡು ವರದಿ ಸಲ್ಲಿಸಲು ಶೀಘ್ರವೇ ಈ ಸಂಬಂಧ ಆಯೋಗ ರಚನೆ ಮಾಡಲಾಗುವುದು ಎಂದು ಹೇಳಿದರು.
ಬಜೆಟ್‌ಗೂ ಮುನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರು ನೌಕರರ ಸಮಾನ ವೇತನ ಆಯೋಗ ರಚಿಸುವಂತೆ ಪತ್ರ ಬರೆದಿದ್ದರು. ಆದರೆ ಮುಖ್ಯಮಂತ್ರಿಗಳು ಈ ಸಂಬಂಧ ಬಜೆಟ್‌ನಲ್ಲಿ ಘೋಷಿಸಿರಲಿಲ್ಲ.
ರಾಜ್ಯದಲ್ಲಿ ಒಟ್ಟು 7.60 ಲಕ್ಷ ಸರಕಾರಿ ಹುದ್ದೆಗಳಿವೆ. ಇದರಲ್ಲಿ 5.20 ಲಕ್ಷ ಮಂದಿ ಕಾರ್ಯ ನಿರ್ವಹಿಸುತ್ತಿದ್ದು, 2.40 ಲಕ್ಷ ಹುದ್ದೆ ಖಾಲಿ ಉಳಿದಿವೆ. ಖಾಲಿ ಹುದ್ದೆಗಳಿಂದ ಬೊಕ್ಕಸಕ್ಕೆ ಉಳಿತಾಯವಾಗುತ್ತಿದೆ. ಇದರ ಮಧ್ಯೆ ಕೇಂದ್ರ ಸರಕಾರಿ ನೌಕರರ ಸಮಾನ ವೇತನ ಆಯೋಗ ರಚಿಸಿ ಪರಿಷ್ಕೃತ ವೇತನ ನೀಡಲು 10,500 ಕೋಟಿ ರೂ. ಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಖಾಲಿ ಹುದ್ದೆಗಳ ಪೈಕಿ, 91 ಸಾವಿರ ಮಂದಿ ಹೊರಗುತ್ತಿಗೆ ನೌಕರರಿದ್ದಾರೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ