ಅಂತಾರಾಜ್ಯ ಜಲವಿವಾದ: ಅಗತ್ಯ ಕಂಡುಬಂದರೆ ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗ-ಸಿಎಂ ಬೊಮ್ಮಾಯಿ

ಬೆಂಗಳೂರು: ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಹಾಗೂ ಇತರ ವಿಚಾರಗಳ ಕುರಿತು ದೀರ್ಘವಾದ ಚರ್ಚೆಯಾಗಿದೆ. ಅಂತಾರಾಜ್ಯ ಜಲವಿವಾದಗಳ ಹಿನ್ನೆಲೆಯಲ್ಲಿ ಅಗತ್ಯವಿದ್ದರೆ ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗದ ಜೊತೆ ತೆರಳಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸರ್ವಪಕ್ಷಗಳ ಸಭೆಯ ಬಳಿಕ ಮಾತನಾಡಿದ ಅವರು, ಅಂತಾರಾಜ್ಯ ಜಲವಿವಾದದ ಕುರಿತಾಗಿ ಚರ್ಚೆ ನಡೆಸಲು ಸರ್ವಪಕ್ಷ ನಾಯಕರ ಸಭೆ ಕರೆಯಲಾಗಿತ್ತು .ಸಭೆಯಲ್ಲಿ ಸುದೀರ್ಘ ಚರ್ಚೆ ಆಗಿದೆ. ಮೇಕೆದಾಟು ಯೋಜನೆ ವಿವಾದ ವಿಚಾರವಾಗಿ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರದ ಮುಂದಿದೆ. ಈಗಾಗಲೇ ಹಲವು ಸುತ್ತಿನ ಚರ್ಚೆಗಳು ನಡೆದಿದ್ದು, ಅಂತಿಮ ಸಭೆಯನ್ನು ಕರೆಯುವ ತೀರ್ಮಾನ ಆಗಿದೆ ಎಂದು ಜಲಸಂಪನ್ಮೂಲ ಕಾರ್ಯದರ್ಶಿ ತಿಳಿಸಿದ್ದಾರೆ. ಪ್ರಾಧಿಕಾರದ ಪ್ರೊಸೀಡಿಂಗ್ಸ್ ನಲ್ಲಿ ಏನೆಲ್ಲ ಚರ್ಚೆ ಆಗಿದೆ ಎಂಬ ಬಗ್ಗೆ ಮಾಹಿತಿ ಕೇಳಿದ್ದೇವೆ ಎಂದು ಹೇಳಿದರು.

ಜೊತೆಗೆ ಯೋಜನೆಗೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಪಡೆಯಲು ಪ್ರಯತ್ನಗಳು ಮುಂದುವರಿಯಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಶೀಘ್ರದಲ್ಲಿ ಭೇಟಿ ಮಾಡುತ್ತೇವೆ. ಅಲ್ಲದೆ ಬೇಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಸಭೆ ನಡೆಸಲು ಸರ್ವಪ್ರಯತ್ನ ಮಾಡಲಾಗುವುದು ಎಂದು ಸಭೆಗೆ ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದರು.
ಸೋಮವಾರ ಅಥವಾ ಮಂಗಳವಾರ ಜಲಸಂಪನ್ಮೂಲ ಸಚಿವರಾಧ ಗೋವಿಂದ ಕಾರಜೋಳ ದೆಹಲಿಗೆ ತೆರಳಿ ಸಭೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ನಾನು ಅಧಿವೇಶನದ ಬಳಿಕ ದೆಹಲಿಗೆ ಹೋಗಿ ಕೇಂದ್ರದ ಸಚಿವರ ಜೊತೆ ಎಲ್ಲ ಜಲವಿವಾದಗಳ ಬಗ್ಗೆಯೂ ಚರ್ಚೆ ನಡೆಸುತ್ತೇನೆ. ಇದೆಲ್ಲ ಆದ ಬಳಿಕ‌ ಅಗತ್ಯವಾದರೆ ಸರ್ವಪಕ್ಷ ನಾಯಕರ ನಿಯೋಗ ಅಗತ್ಯ ಕಂಡುಬಂದರೆ ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗ ಕೊಂಡೊಯ್ಯುತ್ತೇವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಪರಿಸರ ಇಲಾಖೆಯ ಅನುಮತಿ ಪಡೆದು ಆದಷ್ಟು ಬೇಗ ಮಹದಾಯಿ ಯೋಜನೆ ಕೆಲಸ ಆರಂಭಿಸುವ ಭರವಸೆಯಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಪ್ರಕರಣವನ್ನು ಇಬ್ಬರು ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದರು. ಅವರು ವಿಚಾರಣೆಯಿಂದ ಹಿಂದೆ ಸರಿಸಿದ್ದಾರೆ. ಹೊಸ ನ್ಯಾಯಾಧೀಶರ ನೇಮಕ ಆಗಬೇಕಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಲ್ಲಿ ಹೊಸ ನ್ಯಾಯಾಧೀಶರ ನೇಮಕಕ್ಕೆ ಮನವಿ ಮಾಡಿದ್ದೇವೆ. ಎಂದರು.
ಸಭೆಯಲ್ಲಿ ಅಂತಾರಾಜ್ಯ ನದಿ ಜೋಡಣೆ ಬಗ್ಗೆಯೂ ಚರ್ಚೆ ಆಗಿದೆ. ನಮ್ಮ ರಾಜ್ಯದ ಪಾಲು ಪಡೆದ ಬಳಿಕ ನದಿ ಜೋಡಣೆಗೆ ಒಪ್ಪುತ್ತೇವೆ ಎಂಬುದು ನಮ್ಮ ನಿಲುವಾಗಿದೆ. ಸರ್ಕಾರ ಈ ನಿಲುವಿಗೆ ಬದ್ಧವಾಗಿದೆ. ನದಿ ಜೋಡಣೆ ಯೋಜನೆಯ ತಾಂತ್ರಿಕ‌ ಅಂಶಗಳನ್ನು ಕೇಂದ್ರದಿಂದ ಶೀಘ್ರ ಪಡೆದುಕೊಳ್ಳುತ್ತೇವೆ ಇದರ ತಾಂತ್ರಿಕ ಮಾಹಿತಿಯನ್ನು ವಿರೋಧ ಪಕ್ಷಗಳ ಜೊತೆಗೆ ಹಂಚಿಕೊಳ್ಳಲಾಗುವುದು ಎಂದರು.

 

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement