ಈ ವರ್ಷ ರಾಜ್ಯದ ಪಠ್ಯಪುಸ್ತಕದಲ್ಲಿ ಭಗವದ್ಗೀತೆಯ ವಿಷಯ ಅಳವಡಿಕೆ ಇಲ್ಲ: ಸಚಿವ ನಾಗೇಶ

ಬೆಂಗಳೂರು: ಗುಜರಾತ್‌ನಲ್ಲಿ ಮಾಡಿದಂತೆ ಕರ್ನಾಟಕದಲ್ಲೂ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಪರಿಚಯಿಸುವ ವಿಚಾರ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಪಠ್ಯಪುಸ್ತಕದಲ್ಲಿ ಈ ವರ್ಷ ಪಠ್ಯದಲ್ಲಿ ಭಗವದ್ಗೀತೆಯನ್ನ ಸೇರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಹಲವರು ಈಗ ಪುಸ್ತಕದಲ್ಲಿ ಜ್ಞಾನವಿದೆ, ಆದರೆ ಸಂಸ್ಕಾರವಿಲ್ಲ ಎಂದು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಜ್ಞಾನದ ಜತೆ ಸಂಸ್ಕಾರ ಕಲಿಸಬೇಕಿದೆ. ನೈತಿಕತೆ ಹಾಗೂ ಸಂಸ್ಕಾರ ಬೆಳೆಸುವ ವಿಷಯಗಳನ್ನೂ ಅದರಲ್ಲಿ ಅಳವಡಿಸುವಂತೆ ಹಲವರು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ ಎಂದು ಸಚಿವ ನಾಗೇಶ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ತಜ್ಞರ ಜೊತೆ ಈ ಬಗ್ಗೆ ಮೊದಲು ಚರ್ಚೆ ಮಾಡುತ್ತೇವೆ. ನಂತರ ಅದನ್ನು ಹೇಗೆ ಜಾರಿ ಮಾಡಬೇಕೆಂಬುದರ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

 

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement