ಕರ್ನಾಟಕದಲ್ಲಿ ಹಲವೆಡೆ ನಾಲ್ಕು ದಿನ ಮಳೆ ಸಾಧ್ಯತೆ: ಮುನ್ಸೂಚನೆ

posted in: ರಾಜ್ಯ | 0

ಬೆಂಗಳೂರು : ಇಂದಿನಿಂದ (ಮಾರ್ಚ್‌ 18) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 21ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 19 ರಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಇಂದು, ಶುಕ್ರವಾರ ಹಾಗೂ ನಾಳೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಾರ್ಚ್ 20-21 ರ ನಡುವೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಕೊಡಗು, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಇನ್ಫೋಸಿಸ್ ಮುಖ್ಯಸ್ಥರಾಗಿ ಮುಂದಿನ 5 ವರ್ಷಗಳ ವರೆಗೆ ಸಲೀಲ್ ಪರೇಖ್ ಮರುನೇಮಕ
advertisement

ನಿಮ್ಮ ಕಾಮೆಂಟ್ ಬರೆಯಿರಿ