ಹುಬ್ಬಳ್ಳಿ: ನಗರದ ಹೊರವಲಯದ ಗಬ್ಬೂರ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದ ಬಗ್ಗೆ ವರದಿಯಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಗಬ್ಬೂರ ಬೈಪಾಸ್ ವೃತ್ತದ ಬಳಿಯ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಾಲಕ ಮತ್ತು ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ದೊಡ್ಡಬಳ್ಳಾಪುರವರಾದ ಚಾಲಕ ರಂಜಿತ ಮತ್ತು ಪ್ರಯಾಣಿಕ ರಾಕೇಶ ಎಂದು ಗುರುತಿಸಲಾಗಿದೆ. ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.ದೊಡ್ಡ ಬಳ್ಳಾಪುರದಿಂದ ದಾಂಡೇಲಿಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ನಿತಿನ್, ಲೋಕೇಶ, ಅಮಿತ, ಪ್ರಮೋದ್ ಎಂಬವರು ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ