ಪುನೀತರಾಜಕುಮಾರಗೆ ಮರಣೋತ್ತರವಾಗಿ ಸಹಕಾರ ರತ್ನ ಪ್ರಶಸ್ತಿ ಘೋಷಣೆ

posted in: ರಾಜ್ಯ | 0

ಬೆಂಗಳೂರು: ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತರಾಜ್‍ಕುಮಾರ್‌ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ನಂತರ ಈಗ ಮರಣೋತ್ತರವಾಗಿ ಸಹಕಾರ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡುವ ಸಹಕಾರ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನಟ ಪುನೀತರಾಜ್‌ಕುಮಾರ್‌ ಅವರಿಗೆ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ ತಿಳಿಸಿದ್ದಾರೆ.

ನಂದಿನಿ ಹಾಲು ಉತ್ಪನ್ನಗಳಿಗೆ ಅವರು ರಾಯಭಾರಿಯಾಗಿದ್ದು, ಅವರು ಉಚಿತವಾಗಿ ಸೇವೆ ಸಲ್ಲಿಸಿದ್ದರು. ಈ ಸೇವೆಯನ್ನು ಪರಿಗಣಿಸಿ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಮಾರ್ಚ್ 20ರಂದು ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರಶಸ್ತಿಯು 15 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಐತಿಹಾಸಿಕ ಚಿತ್ರದುರ್ಗ ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆ
advertisement

ನಿಮ್ಮ ಕಾಮೆಂಟ್ ಬರೆಯಿರಿ