ರೈಲು ಡಿಕ್ಕಿ ಹೊಡೆದು ಕಾಡುಕೋಣ-ಮರಿ ಸಾವು

posted in: ರಾಜ್ಯ | 0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಗಡಿಪಿಲ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಕಾಡುಕೋಣ ಮತ್ತು ಅದರ ಮರಿ ಮೃತಪಟ್ಟ ಘಟನೆ ಗುರುವಾರ ಮಾ.17ರಂದು ನಡೆದ ಬಗ್ಗೆ ವರದಿಯಾಗಿದೆ.

ಕಾಡುಕೋಣ ಮತ್ತು ಅವರ ಮರಿ ಮೇವು ಅರಸಿ ಕಾಡಿನಿಂದ ಹೊರ ಬಂದಿದ್ದು, ಈ ವೇಳೆ ಗುರುವಾರ ಬೆಳಿಗ್ಗೆ ರೈಲುಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಪುತ್ತೂರು ವಲಯ ಅರಣ್ಯಾಧಿಕಾರಿ , ಉಪ ವಲಯ ಅರಣ್ಯಾಧಿಕಾರಿ ಸೇರಿದಂತೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಮೃತ ಪ್ರಾಣಿಗಳ ಮರಣೋತ್ತರ ಪರೀಕ್ಷೆಯನ್ನು ಸ್ಥಳದಲ್ಲೇ ನಡೆಸಲಾಯಿತು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಇನ್ಫೋಸಿಸ್ ಮುಖ್ಯಸ್ಥರಾಗಿ ಮುಂದಿನ 5 ವರ್ಷಗಳ ವರೆಗೆ ಸಲೀಲ್ ಪರೇಖ್ ಮರುನೇಮಕ
advertisement

ನಿಮ್ಮ ಕಾಮೆಂಟ್ ಬರೆಯಿರಿ