ಏಷ್ಯಾ-ಯುರೋಪಿನ ಕೆಲ ರಾಷ್ಟ್ರಗಳಲ್ಲಿ ಸೋಂಕು ಹೆಚ್ಚಳ: ಮುನ್ನೆಚ್ಚರಿಕೆಗೆ ರಾಜ್ಯಗಳಿಗೆ ಕೇಂದ್ರದ ಸೂಚನೆ

ನವದೆಹಲಿ: ಏಷ್ಯಾ ಹಾಗೂ ಯುರೋಪಿನ ಕೆಲ ರಾಷ್ಟ್ರಗಳಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಜಾಗೃತಿ ಮೂಡಿಸಬೇಕು ಎಂದು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದನ್ನು ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿ ಖಚಿತಪಡಿಸಿಕೊಳ್ಳಬೇಕು. ಮಾರ್ಗಸೂಚಿಗಳ ಕಾರ್ಯತಂತ್ರ ಕುರಿತಂತೆ ಹೆಚ್ಚು ಕೇಂದ್ರೀಕರಿಸಬೇಕು, ಆರ್ಥಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ಪುನರಾರಂಭಿಸುವಾಗ ಸೂಕ್ತವಾದ ನಿಯಮಗಳು ಹಾಗೂ ಲಸಿಕೆಯನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿವೆ.

ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ಭೂಷಣ್ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಗಳನ್ನು ಪತ್ತೆ ಹಚ್ಚಲು ಪರೀಕ್ಷೆಗಳನ್ನು ನಡೆಸಬೇಕು ಹಾಗೂ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಲಸಿಕೆ ಪಡೆಯುವ ಕುರಿತು ಜನಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದ್ದಾರೆ. ಇನ್ಸಾಗೋಗ್ ನೋಡಲ್ ಏಜೆನ್ಸಿ ನೀಡಿರುವ ನಿಯಮಗಳನುಸಾರ ಇನ್ಸಾಗೋಗ್ ನೆಟ್‌ವರ್ಕ್‌ಗಳಿಗೆ ಸಾಕಷ್ಟು ಸಂಖ್ಯೆಯ ರೂಪಾಂತರ ಮಾರ್ಗಗಳನ್ನು ಸಲ್ಲಿಸಲಾಗಿದೆ.

ರೂಪಾಂತರಗಳನ್ನು ಸಮಯೋಚಿತವಾಗಿ ಪತ್ತೆ ಹಚ್ಚುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ರಾಜ್ಯಗಳು ಮಾಸ್ಕ್ ಧರಿಸುವುದು, ಸಾರ್ಜಜನಿಕ ಪ್ರದೇಶಗಳು ಮತ್ತು ಸಭೆಗಳಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳುವುದು ಪರಿಣಾಮಕಾರಿ, ಕೈ ತೊಳೆಯುವುದು ಹೀಗೆ ನೈರ್ಮಲ್ಯದ ಅಭ್ಯಾಸದಂತಹ ಸೂಕ್ತ ನಡವಳಿಕೆ ಅನುಸರಿಸುತ್ತಿರುವುದನ್ನು ಮುಂದುವರಿಸುವುದುನ್ನು ಖಚಿತಪಡಿಸಿಕೊಳ್ಳಬೇಕು. ಭಾರತದಲ್ಲಿ ಸದ್ಯ ಕೋವಿಡ್ ಪ್ರಕರಣಗಳ ಸ್ಥಿರವಾದ ಇಳಿಕೆಯಿದ್ದು, ಪ್ರಸ್ತುತ ಐದು ಸಾವಿರಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳಿವೆ. ಆದರೂ ಸಹ ಆಗ್ನೇಯ ಏಷ್ಯಾ ಮತ್ತು ಯುರೋಪಿನ ಕೆಲವು ದೇಶಗಳಾದ್ಯಂತ ಸೋಂಕು ಹೆಚ್ಚಳವಾಗುತ್ತಿರುವುದನ್ನು ಗಂಭಿರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ: ಚುನಾವಣಾಧಿಕಾರಿಗಳ ವಿರುದ್ಧ ಕಾಂಗ್ರೆಸ್‌ ಕಿಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement