ದಿ ಕಾಶ್ಮೀರ್​ ಫೈಲ್ಸ್ ಸಿನಿಮಾ ನಿರ್ದೇಶಕ ವಿವೇಕ ಅಗ್ನಿಹೋತ್ರಿಗೆ ವೈ ಕೆಟಗರಿ ಭದ್ರತೆ

ನವದೆಹಲಿ: ಎಲ್ಲೆಡೆ ಹಿಟ್‌ ಆಗಿರುವ ಹಾಗೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನಿರ್ದೇಶಕ ವಿವೇಕ ಅಗ್ನಿಹೋತ್ರಿ (Vivek Agnihotri) ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್ ಐ ವರದಿ ಮಾಡಿದೆ.

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಈ ಸಿನಿಮಾ ತಯಾರಾಗಿದೆ. ಈ ಚಿತ್ರದಲ್ಲಿ ತೋರಿಸಲಾದ ದೃಶ್ಯಗಳ ಬಗ್ಗೆ ಕೆಲವರಿಂದ ತಕರಾರು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರಿಗೆ ವೈ ಕೆಟಗರಿ ಭದ್ರತೆ (Y category security) ನೀಡಲಾಗುತ್ತಿದೆ. ಅಭಿಷೇಕ್​ ಅಗರ್​ವಾಲ್​ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ, ವಿಥುನ್ ಚಕ್ರವರ್ತಿ, ಪುನೀತ್​ ಇಸ್ಸಾರ್​, ಪ್ರಕಾಶ್​ ಬೆಳವಾಡಿ ಮುಂತಾದವರು ಈ ಚಲನಚಿತ್ರದಲ್ಲಿ ನಟಿಸಿದ್ದಾರೆ.

ಕಳೆದ ವಾರ ‘ದಿ ಕಾಶ್ಮೀರ್ ಫೈಲ್ಸ್’ ಪ್ರದರ್ಶನ ಕಂಡ ನಂತರ ಅಗ್ನಿಹೋತ್ರಿ ಸುದ್ದಿಯಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ವೈ ಕ್ಯಾಟಗರಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ಹೇಳಲಾಗಿದೆ. ಈ ಸಿನೆಮಾಕ್ಕೆ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತೆರಿಗೆ ವಿನಾಯ್ತಿ ಘೋಷಣೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ವಂದೇ ಭಾರತ ರೈಲಿನಡಿ ಸಿಲುಕಿದ ಹಸು ; ಪ್ರಾಣಾಪಾಯದಿಂದ ಪಾರಾಗಿದ್ದೇ ಒಂದು ವಿಸ್ಮಯ..

ವೈ-ಕೆಟಗರಿ ಭದ್ರತೆಯಡಿಯಲ್ಲಿ, ಅಗ್ನಿಹೋತ್ರಿ ಅವರಿಗೆ ಎಂಟು ಅಧಿಕಾರಿಗಳ ಭದ್ರತೆಯನ್ನು ಒದಗಿಸಲಾಗುವುದು, ಇದರಲ್ಲಿ ಇಬ್ಬರು ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಇರಲಿದ್ದಾರೆ.
ಕಾಶ್ಮೀರ ಫೈಲ್ಸ್ ಕಾಶ್ಮೀರಿ ಪಂಡಿತರು ಅನುಭವಿಸಿದ ಕ್ರೌರ್ಯಗಳನ್ನು ಮತ್ತು 1990 ರ ದಶಕದಲ್ಲಿ ಕಣಿವೆಯಿಂದ ಸಮುದಾಯದ ಸಾಮೂಹಿಕ ವಲಸೆ ಬಗ್ಗೆ ವಿವರಿಸುತ್ತದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement