ಮಸಾಜ್ ನೆಪದಲ್ಲಿ ನೆದರ್ಲ್ಯಾಂಡ್ಸ್ ಮಹಿಳೆಯ ಮೇಲೆ ಅತ್ಯಾಚಾರ

ಜೈಪುರ: ರಾಜಸ್ಥಾನದ ಜೈಪುರದಲ್ಲಿ ನೆದರ್‌ಲ್ಯಾಂಡ್‌ನ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದ್ದು, ನಗರದ ಹೋಟೆಲ್ ಒಂದರಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಆಯುರ್ವೇದ ಮಸಾಜ್ ಮಾಡುವ ನೆಪದಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ನೆದರ್ಲ್ಯಾಂಡ್ಸ್ ನಿವಾಸಿಯಾಗಿದ್ದು, ಅವರು ರಾಜಸ್ಥಾನಕ್ಕೆ ಭೇಟಿ ನೀಡಿದ್ದರು.

ಸಿಂಧಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇವಲ ನಾಲ್ಕು ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಕೇರಳ ನಿವಾಸಿಯಾಗಿದ್ದು, ಆತ ಜೈಪುರದ ಖತಿಪುರದಲ್ಲಿ ಮಸಾಜ್ ಸೇವಾ ಪೂರೈಕೆದಾರರಾಗಿ ಕೆಲಸ ಮಾಡುತ್ತಿದ್ದ. ಆತ ಕೇರಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.
ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಿಚಾ ತೋಮರ್ ತಿಳಿಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement