15 ಸಾವಿರ ಶಿಕ್ಷಕರ ನೇಮಕಾತಿ : ಮೇ 21, 22ರಂದು ಸಾಮಾನ್ಯ ಪ್ರವೇಶ ಪರೀಕ್ಷೆ

ಬೆಂಗಳೂರು: ಶಿಕ್ಷಕರ ನೇಮಕಾತಿ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ 21 ಮತ್ತು 22ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಮಾರ್ಚ್‌ 22 ರಿಂದ ಏಪ್ರಿಲ್‌ 22ರ ವರೆಗೆ ಅರ್ಜಿ ಸಲ್ಲಿಕೆ ಅವಕಾಶವಿದೆ. ಆರರಿಂದ ಎಂಟು ತಿಂಗಳಿನಲ್ಲಿ ಪ್ರಕ್ರಿಯೆ ಪೂರ್ಣವಾಗಲಿದೆ ಎಂದರು.

ಪರೀಕ್ಷೆಗೆ ಮೂರು ಪತ್ರಿಕೆಗಳು ಇರುತ್ತದೆ. ಒಟ್ಟು 400 ಮಾರ್ಕ್ಸ್ ಗೆ ಪರೀಕ್ಷೆ ನಡೆಯಲಿದೆ. ಮೊದಲ ಪತ್ರಿಕೆ ಜನರಲ್ ಪೇಪರ್ ಆಗಿದ್ದು 150 ಅಂಕ ನಿಗದಿಯಾಗಿದೆ. 2ನೇ ಪತ್ರಿಕೆಗಾಗಿ 150 ಮಾರ್ಕ್ ಇರುತ್ತೆ. ವಿಷಯವಾರು ಪರೀಕ್ಷೆ ಇದಾಗಿರುತ್ತದೆ. ಪಾಸ್ ಆಗಲು 45 ಮಾರ್ಕ್ ಕಡ್ಡಾಯವಾಗಿರುತ್ತದೆ. 3 ನೇ ಪತ್ರಿಕೆ ಭಾಷಾವಾರು ಪರೀಕ್ಷೆಯಾಗಿದ್ದು, 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಪಾಸ್ ಆಗಲು 50 ಮಾರ್ಕ್ಸ್ ಕಡ್ಡಾಯವಾಗಿದೆ.

ಎಂಜಿನಿಯರಿಂಗ್ ಮುಗಿಸಿದ ವಿದ್ಯಾರ್ಥಿಗಳು ಕೂಡ ಈ ಬಾರಿ ಗಣಿತ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಬಹುದು. ಈ ಬಾರಿ ವಯೋಮಿತಿ 2 ವರ್ಷ ಸಡಲಿಕೆ ಮಾಡಲಾಗಿದೆ. 45 ವರ್ಷದಿಂದ 47 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಇದು ಎಸ್‌ಸಿ/ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅನ್ವಯ. ಒಬಿಸಿ- 45 ಸಾಮಾನ್ಯ ವರ್ಗ – 42 ವರ್ಷಗಳನ್ನು ನಿಗದಿ ಮಾಡಲಾಗಿದೆ..

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement