ಕಾರು ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರ ಸಾವು

posted in: ರಾಜ್ಯ | 0

ರೋಣ(ಗದಗ): ಗದಗ ಜಿಲ್ಲೆಯ ರೋಣ ಪಟ್ಟಣದ ಸಾರಿಗೆ ಬಸ್ ಡಿಪೋ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತರು ಗದಗ ಮೂಲದ ಯುವಕರು ಎಂಬ ಮಾಹಿತಿ ಲಭ್ಯವಾಗಿದ್ದು, ಶನಿವಾರ ಸಂಜೆ ರೋಣದಿಂದ ಗದಗ ನಗರದ ಕಡೆಗೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಏಕಾಏಕಿ ಮರಕ್ಕೆ ಡಿಕ್ಕಿ ಹೊಡೆದಿದೆ. ಕ್ಷಣ ಮಾತ್ರದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ಈ ವೇಳೆ ದಾರಿ ಹೋಕರು ಕಾರಿನಲ್ಲಿದ್ದವರನ್ನು ಹೊರಗೆಳೆದು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ ಪ್ರಯೋಜನವಾಗಲಿಲ್ಲ. ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ರೋಣ ಪಟ್ಟಣದಿಂದ ಗದಗ ಕಡೆ ಕಾರು ಬರುತ್ತಿತ್ತು ಎಂದು ಹೇಳಲಾಗಿದೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ರಾಜ್ಯಸಭೆ ಅಥವಾ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಯಾವುದೇ ಮೈತ್ರಿಯಿಲ್ಲ: ಸಿದ್ದರಾಮಯ್ಯ
advertisement

ನಿಮ್ಮ ಕಾಮೆಂಟ್ ಬರೆಯಿರಿ