ಖಾಸಗಿ ಬಸ್​ ಪಲ್ಟಿ: 5 ಮಂದಿ ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ

posted in: ರಾಜ್ಯ | 0

ತುಮಕುರು: ಖಾಸಗಿ ಬಸ್ ಪಲ್ಟಿಯಾಗಿ 5 ಮಂದಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪಳವಳ್ಳಿ ಕಟ್ಟೆ ಮೇಲೆ ನಡೆದಿದೆ.
ಶನಿವಾರ ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಈ ಅಪಘಾತದಲ್ಲಿ5 ಮಂದಿ ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಖಾಸಗಿ ಬಸ್‍ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಬಸ್​ ಬಳಿಕ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯರು ಆಸ್ಪತ್ರೆಗೆ ರವಾನಿಸುತ್ತಿದ್ದಾರೆ. ಗಾಯಾಳುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಹುಚ್ಚು ಸಾಹಸ...ಶ್ರೀನಿವಾಸ ಸಾಗರ ಅಣೆಕಟ್ಟಿನ ಗೋಡೆ ಹತ್ತುವಾಗ 30 ಅಡಿ ಎತ್ತರದಿಂದ ಬಿದ್ದ ಯುವಕ | ದೃಶ್ಯ ವೀಡಿಯೊದಲ್ಲಿ ಸೆರೆ
advertisement

ನಿಮ್ಮ ಕಾಮೆಂಟ್ ಬರೆಯಿರಿ