ಮಂಗಳೂರು: 36 ಲಕ್ಷ ರೂ. ಮೌಲ್ಯದ 706 ಗ್ರಾಂ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಶುಕ್ರವಾರ (ಮಾರ್ಚ್ 18) ಬಂಧಿಸಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ದುಬೈಯಿಂದ ಬಂದಿದ್ದ ವ್ಯಕ್ತಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಬಂದಿದ್ದ. ಆತನ ಬಳಿ 24 ಕ್ಯಾರೆಟ್ ನ 706 ಗ್ರಾಂ ಚಿನ್ನ ಪತ್ತೆಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 36.53 ಲಕ್ಷ ರೂ.ಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ರೀತಿಯ ಹಲವು ಪ್ರಕರಣಗಳು ಈ ಹಿಂದೆಯೂ ಇಂತಹ ಚಿನ್ನ ಕಳ್ಳ ಸಾಗಣೆ ಮಾಡುವರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿರುವುದು ವರದಿಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ