‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿ ವಾಪಸ್ಸಾಗುತ್ತಿದ್ದ ಬಿಜೆಪಿ ಸಂಸದರ ವಾಹನದ ಮೇಲೆ ಬಾಂಬ್ ದಾಳಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಣಾಘಾಟ್‌ನ ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಅವರು ನಾಡಿಯಾ ಜಿಲ್ಲೆಯ ಕಲ್ಯಾಣಿಯಿಂದ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿ ಹಿಂತಿರುಗುತ್ತಿದ್ದಾಗ ಅವರ ವಾಹನದ ಮೇಲೆ ಬಾಂಬ್ ಎಸೆಯಲಾಗಿದೆ.
ಹರಿಂಗಟ ಪೊಲೀಸ್ ಠಾಣೆ ವ್ಯಾಪ್ತಿಯ ಸಿಮುಲ್ತಲ್ಲಾ ಬಳಿಯ ಏಮ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ಹಿಂದೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ವರದಿಗಳ ಪ್ರಕಾರ, ಹರಿಂಗಟಾ ಪೊಲೀಸ್ ಠಾಣೆಯ ಸಿಮುತಲ್ಲಾ ಬಳಿಯ ಏಮ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ, ಟಿಎಂಸಿ ಆಡಳಿತದಲ್ಲಿ ಸಂಸದರೂ ಸುರಕ್ಷಿತವಾಗಿಲ್ಲ.
ಗೂಂಡಾಗಳಿಗೆ ಮುಕ್ತ ಹಸ್ತ ನೀಡಲಾಗಿದೆ ಮತ್ತು ಅವರ ಮೇಲೆ ಯಾವುದೇ ನಿಯಂತ್ರಣವಿಲ್ಲ. ಕಾನೂನಿನ ಭಯವಿಲ್ಲ. ಮಮತಾ ಬ್ಯಾನರ್ಜಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾರೆ” ಎಂದು ಘಟನೆಯ ನಂತರ ಡಾ. ಸುಕಾಂತ ಮಜುಂದಾರ್ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿರುವ ‘ದಿ ಕಾಶ್ಮೀರ್ ಫೈಲ್ಸ್’ ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯವನ್ನು ಚಿತ್ರಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಚಿತ್ರವನ್ನು ಶ್ಲಾಘಿಸಿದ್ದಾರೆ ಮತ್ತು ಉತ್ತರ ಪ್ರದೇಶ, ಹರಿಯಾಣ, ಗುಜರಾತ್, ಕರ್ನಾಟಕ ಮತ್ತು ಮಧ್ಯಪ್ರದೇಶದಂತಹ ಅನೇಕ ರಾಜ್ಯಗಳಲ್ಲಿ ಇದನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಆದರೆ, ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಚಿತ್ರವನ್ನು ತೆರಿಗೆ ಮುಕ್ತಗೊಳಿಸುವುದಿಲ್ಲ ಎಂದು ಹೇಳಿದ್ದಾರೆ.
ಅನುಪಮ್ ಖೇರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಒಳಗೊಂಡ ಚಿತ್ರವು 100 ಕೋಟಿ ರೂ.ಗಳ ಗಳಿಕೆಯ ಕ್ಲಬ್‌ಗೆ ಪ್ರವೇಶಿಸಿದೆ.

ಓದಿರಿ :-   ಈ ಯೋಜನೆಯ ಎಲ್​ಪಿಜಿ ಸಿಲಿಂಡರ್​ಗೆ 200 ರೂ. ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ..!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ