ತುಮಕೂರು: ಜಿಲ್ಲೆಯ ಪಾವಗಡದ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆಖಾಸಗಿ ಬಸ್ ಪಲ್ಟಿಯಾಗಿ ಐವರು ಮೃತಪಟ್ಟ ಅಪಘಾತ ಸ್ಥಳಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳು ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ವೈಯಕ್ತಿಕವಾಗಿ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ಅಪಘಾತದ ಕುರಿತಾಗಿ ಆರ್.ಟಿ.ಓ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಬಳಿಕ ಪಾವಗಡದ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಂತರ ಈ ಪರಿಹಾರದ ಘೋಷಿಸಿದ್ದಾರೆ.
ಖಾಸಗಿ ಬಸ್ ವೈ.ಎನ್ ಹೊಸಕೋಟೆಯಿಂದ ಪಾವಗಡಕ್ಕೆ ಹೋಗುತ್ತಿದ್ದಾಗ ಬಸ್ ಟಾಪ್‍ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಕುಳಿತಿದ್ದರು. ಬಸ್ ಓವರ್ ಲೋಡ್ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಪಾವಗಡದ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆ ಏರಿ ಮೇಲೆ ಬಸ್ ಉರುಳಿದೆ. ಪರಿಣಾಮ ಐವರು ಮೃತಪಟ್ಟಿದ್ದರು. ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ