ರಾಜ್ಯದಲ್ಲಿಯೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಸಮರ್ಥನೆ

ಯಾದಗಿರಿ: ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಕೆ ಮಾಡುವುದರಿಂದ ಮಕ್ಕಳಲ್ಲಿ ನೈತಿಕತೆ ಪ್ರಜ್ಞೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಹ್ಯಾಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿರುವ ಬಗ್ಗೆ ನಮ್ಮ ಸಚಿವರು ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ಇದು ಮಕ್ಕಳಲ್ಲಿ ನೈತಿಕತೆ ಮಟ್ಟ ಹೆಚ್ಚಾಗಲು ಸಹಕಾರಿಯಾಗಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಇದರ ಅಳವಡಿಕೆಯಿಂದ ನೈತಿಕ ಮಟ್ಟ ಹೆಚ್ಚಿಸಲು ಅನುಕೂಲವಾಗಲಿದೆ. ಶಾಲಾ ಮಟ್ಟದಲ್ಲಿ ಅಳವಡಿಸಿದರೆ ಬೌದ್ಧಿಕಮಟ್ಟದಲ್ಲಿ ಸುಧಾರಣೆಯಾಗುತ್ತದೆ. ಅಳವಡಿಸುವುದರಲ್ಲಿ ತಪ್ಪೇನಿಲ್ಲವಲ್ಲ. ಅಳವಡಿಕೆ ಬಗ್ಗೆ ಈಗಾಗಲೇ ಶಿಕ್ಷಣ ಇಲಾಖೆ ಪೂರ್ವ ಸಿದ್ಧತೆ ನಡೆಸಿದೆ. ಈ ಬಗ್ಗೆ ಅದು ವರದಿ ನೀಡಲಿದೆ. ನಂತರ ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಪಾವಗಡ ಖಾಸಗಿ ಬಸ್ ದುರಂತದ ಬಗ್ಗೆ ಗೊತ್ತಾಗಿದೆ. ಅಲ್ಲಿಗೆ ಭೇಟಿ ನೀಡಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಆಧರಿಸಿ ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡು ನಂತರ ಕ್ರಮಕೈಗೊಳ್ಳುತ್ತೇನೆ ಎಂದರು.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement