ತುಮಕುರು: ಖಾಸಗಿ ಬಸ್ ಪಲ್ಟಿಯಾಗಿ 5 ಮಂದಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪಳವಳ್ಳಿ ಕಟ್ಟೆ ಮೇಲೆ ನಡೆದಿದೆ.
ಶನಿವಾರ ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಈ ಅಪಘಾತದಲ್ಲಿ5 ಮಂದಿ ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಖಾಸಗಿ ಬಸ್‍ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಬಸ್ ಬಳಿಕ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯರು ಆಸ್ಪತ್ರೆಗೆ ರವಾನಿಸುತ್ತಿದ್ದಾರೆ. ಗಾಯಾಳುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ