ಅಸನಿ ಚಂಡುಮಾರತ: ಕರ್ನಾಟಕದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮೂರು ದಿನ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಅಸನಿ ಚಂಡಮಾರುತದಿಂದ ಕರ್ನಾಟಕದಲ್ಲಿ ಮುಂದಿನ 3ರಿಂದ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಲ್ಲದೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ 21ರಿಂದ ಮಾ.23ರ ವರೆಗೆ ಭಾರಿ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆ ಗುಡುಗು ಮಿಂಚು ಸಹಿತ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಬೆಂಗಳೂರಿನಲ್ಲಿಯೂ ಮಳೆಯಾಘಬಹುದು ಎಂದು ತಿಳಿಸಲಾಗಿದೆ.
ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಸಂಜೆ ವೇಳೆ ಕೆಲವೆಡೆ ಭರ್ಜರಿ ಮಳೆಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement