ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿಎನ್ ಬಿರೇನ್ ಸಿಂಗ್ ಮಣಿಪುರದ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆ

ಇಂಫಾಲ: ಇಂಫಾಲದಲ್ಲಿ ನಡೆದ ಮಣಿಪುರ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸ್ಥಾನಕ್ಕೆ ಬಿಜೆಪಿಯ ಹಿರಿಯ ನಾಯಕ ತೊಂಗಂ ಬಿಸ್ವಜಿತ್ ಸಿಂಗ್ ಹೆಸರು ಕೇಳಿ ಬಂದಿತು. ಅಲ್ಲದೆ ಸ್ಪೀಕರ್ ಯುಮ್ನಮ್ ಖೇಮ್‌ಚಂದ್ ಸಿಂಗ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಎನ್. ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ವೀಕ್ಷಕರಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾನೂನು ಸಚಿವ ಕಿರಣ್ ರಿಜಿಜು ಅವರು ಪ್ರಕಟಿಸಿದರು.

ಪ್ರಸ್ತುತ ಮಣಿಪುರ ಸರ್ಕಾರದ ಅವಧಿಯು ಮಾರ್ಚ್ 19, 2022 ರಂದು ಕೊನೆಗೊಳ್ಳಲಿದೆ.
2022ರ ವಿಧಾನಸಭೆ ಫಲಿತಾಂಶ 60 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನ, ಜನತಾ ದಳ (ಯುನೈಟೆಡ್) 6, ಕಾಂಗ್ರೆಸ್ 5, ಎನ್ ಪಿ ಪಿ 7, ಎನ್ ಪಿಎಫ್ 5, ಕುಕಿ ಪೀಪಲ್ಸ್ ಮೈತ್ರಿಕೂಟ 2 ಸ್ಥಾನ ಗೆದ್ದುಕೊಂಡಿವೆ. 6 ಸ್ಥಾನ ಗೆದ್ದಿರುವ ಜನತಾ ದಳ(ಸಂಯುಕ್ತ) ಪಕ್ಷವು ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ಸೂಚಿಸಿದೆ. ಈಗಾಗಲೇ ಎನ್ ಪಿ ಎಫ್ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿರೇನ್ ಸಿಂಗ್, ಮುಂದಿನ ಸರ್ಕಾರದಲ್ಲಿ ಎನ್‌ಪಿಪಿ ನಮ್ಮೊಂದಿಗೆ ಇರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ. ಈ ಮೂಲಕ ಜೆಡಿಯು ಶಾಸಕರಿಗೆ ಸಚಿವರಾಗುವ ಅವಕಾಶ ಲಭ್ಯವಾಗಲಿವೆ. ಎನ್‌ಪಿಎಫ್‌ ಹಾಗೂ ಎನ್‌ಪಿಪಿ ಎರಡೂ ಪಕ್ಷಗಳು ಬಿಜೆಪಿ ನೇತೃತ್ವದ ಪ್ರಸ್ತುತ ಆಡಳಿತ ಮೈತ್ರಿಕೂಟದ ಭಾಗವಾಗಿದೆ. ಆದಾಗ್ಯೂ, ಎರಡೂ ಪಕ್ಷಗಳು ಬಿಜೆಪಿಯೊಂದಿಗೆ ಯಾವುದೇ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿಲ್ಲ. ಎಲ್ಲಾ 60 ಸ್ಥಾನಗಳಲ್ಲಿಯೂ ಏಕಾಂಗಿಯಾಗಲು ಸ್ಪರ್ಧಿಸಿತ್ತು.

ಓದಿರಿ :-   ಎನ್‌ಐಎ ಅಧಿಕಾರಿ-ಪತ್ನಿ ಹತ್ಯೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ