ಉಕ್ರೇನ್‌ನಿಂದ ಮರಳಿದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ ಉಚಿತ ಅವಕಾಶ: ಡಾ.ಕೆ.ಸುಧಾಕರ

posted in: ರಾಜ್ಯ | 0

ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಿಂದ ಕರ್ನಾಟಕಕ್ಕೆ ವಾಪಸ್ ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸುವ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೋಮವಾರ ಸಮಾಲೋಚನೆ ನಡೆಸಿದೆ.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ವಿಚಾರವಾಗಿ ಚರ್ಚೆ ನಡೆದಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಭೆ ನಡೆಸಲಾಯಿತು. ಉಕ್ರೇನ್‌ನಿಂದ ವಾಪಸಾದ 700 ಕ್ಕೂ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಬಾರದು ಎಂಬುದಕ್ಕೆ ನಮ್ಮ ಆದ್ಯತೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ವೈದ್ಯಕೀಯ ಶಿಕ್ಷಣ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕಲಿಕೆ ಮುಂದುವರಿಸಲು ಅವಕಾಶ ನೀಡಲಾಗುತ್ತದೆ ಎಂದರು.
ರಾಜ್ಯಕ್ಕೆ ಆಗಮಿಸಿರುವ ವಿದ್ಯಾರ್ಥಿಗಳ ಪೈಕಿ ಮೊದಲ ವರ್ಷದಿಂದ ಅಂತಿಮ ವರ್ಷದ ವರೆಗಿನ ಎಂಬಿಬಿಎಸ್ ವಿದ್ಯಾರ್ಥಿಗಳಿದ್ದಾರೆ. ರಾಜ್ಯದಲ್ಲಿ ಸುಮಾರು 60 ವೈದ್ಯಕೀಯ ಕಾಲೇಜುಗಳಿವೆ. ಇದರಲ್ಲಿ ಎಲ್ಲ ಕಲಿಕೆ ಮುಂದುವರಿಸಲು ಅವಕಾಶ ನೀಡಲಾಗುತ್ತದೆ. ಕ್ಲಿನಿಕಲ್ ತರಬೇತಿ ಕೂಡ ಮುಂದುವರಿಯಬೇಕು. ಈ ನಿಟ್ಟಿನಲ್ಲಿ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಆದರೆ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೋಂದಣಿ ಮಾಡಲಾಗುವುದಿಲ್ಲ. ಕಲಿಕೆ ಮುಂದುವರಿಸಲು ಅವಕಾಶ ನೀಡಲಾಗುತ್ತದೆ. ಸರ್ಕಾರವೇ ಅವರಿಗೆ ಕಾಲೇಜು ಯಾವುದು ಎಂಬುದನ್ನು ಆಯ್ಕೆ ಮಾಡುತ್ತದೆ. ಅವರು ಇರುವ ವಿಳಾಸದ ಆಧಾರದಲ್ಲಿ ಸನಿಹದ ವೈದ್ಯಕೀಯ ಕಾಲೇಜುಗಳನ್ನು ಆಯ್ಕೆ ಮಾಡಿ ಕೊಡಲಾಗುತ್ತದೆ ಎಂದರು.

ಓದಿರಿ :-   ಬೆಳಗಾವಿ: ಮದುವೆ ಮನೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್‌ನವರಿಂದ ಹಲ್ಲೆ

ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ

ಕೇಂದ್ರ ಸರಕಾರದ ಸಹಯೋಗದೊಂದಿಗೆ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಐದು ಸದಸ್ಯರ ಸಮಿತಿ ರಚನೆ ಆಗಲಿದೆ. ಸಮಿತಿಯಲ್ಲಿ ವೈದ್ಯಕೀಯ ಕಾಲೇಜುಗಳ ನಾಲ್ಕು ಡೀನ್‌ಗಳು ಸಹ ಇರಲಿದ್ದಾರೆ. ಹತ್ತು ದಿನದೊಳಗೆ ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳ ಬಗ್ಗೆ ಕೇಂದ್ರಕ್ಕೆ ಹಾಗೂ ಎನ್ ಎಂಸಿಗೆ ನಾವೂ ಏನು ಮನವಿ ಮಾಡಬೇಕು ಎಂಬುದರ ಬಗ್ಗೆ ಸಮಿತಿ ವರದಿ ಕೊಡಲಿದೆ. ಕೋವಿಡ್ ನಿಂದ ಬೇರೆ ದೇಶಗಳಿಂದ ಕೆಲ ಮೆಡಿಕಲ್ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ. ಅವರ ಬಗ್ಗೆಯೂ ಸಮಿತಿಗೆ ವರದಿ ನೀಡಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ಇದರ ಜೊತೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚೆ ನಡೆಸಲಾಗುವುದು. ಈಗಿರುವ ಕಾನೂನಿನಡಿ ಇವರ ಶೈಕ್ಷಣಿಕ ಜವಾಬ್ದಾರಿ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ