ಸಲ್ಮಾನ್ ಖಾನ್ 1998ರ ಕೃಷ್ಣಮೃಗ ಬೇಟೆ ಪ್ರಕರಣ ರಾಜಸ್ಥಾನ ಹೈಕೋರ್ಟ್‌ಗೆ ವರ್ಗಾವಣೆ

ಜೋಧಪುರ (ರಾಜಸ್ಥಾನ): 1998ರ ಕೃಷ್ಣಮೃಗ ಬೇಟೆ ಪ್ರಕರಣದ ವರ್ಗಾವಣೆ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟು ಅಂಗೀಕರಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಈಗ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಈ ನಿರ್ಧಾರದಿಂದ ನಟ ಸಲ್ಮಾನ್‌ ಖಾನ್‌ ಕೃಷ್ಣ ಮೃಗದ ಕಳ್ಳಬೇಟೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಅರ್ಜಿಗಳು ಈಗ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿವೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಸಲ್ಮಾನ್ ಖಾನ್ ಅವರು ರಾಜಸ್ಥಾನದ ಕಂಕಣಿಯಲ್ಲಿ ಹಮ್ ಸಾಥ್ ಸಾಥ್ ಹೈ ಸಿನೆಮಾ ಚಿತ್ರೀಕರಣಕ್ಕಾಗಿ ರಾಜ್ಯದಲ್ಲಿದ್ದಾಗ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿ ಕೊಂದ ಆರೋಪ ಹೊತ್ತಿದ್ದಾರೆ. ಕೃಷ್ಣಮೃಗಗಳ ಬೇಟೆಯ ಮಾಡಿದ ಆರೋಪದ ಮೇಲೆ ಭಾರತೀಯ ವನ್ಯಜೀವಿ (ರಕ್ಷಣೆ) ಕಾಯಿದೆ, 1972 ರ ಸೆಕ್ಷನ್ 9/51 ರ ಅಡಿಯಲ್ಲಿ ಬಾಲಿವುಡ್ ನಟನ ಮೇಲೆ ಆರೋಪ ಹೊರಿಸಲಾಯಿತು. ಸಲ್ಮಾನ್ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್ 3/25 ಮತ್ತು 3/27 ರ ಅಡಿಯಲ್ಲಿ ಮೊಕದ್ದಮೆಯನ್ನು ಸಹ ದಾಖಲಿಸಲಾಗಿದೆ.

2018 ರಲ್ಲಿ, ಜೋಧ್‌ಪುರದ ನ್ಯಾಯಾಲಯವು ಎರಡು ಕೃಷ್ಣಮೃಗಗಳನ್ನು ಕೊಂದ ಆರೋಪದ ನಂತರ ಸಲ್ಮಾನ್ ಖಾನ್‌ಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಈ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು.
ಅವರ ಹಮ್ ಸಾಥ್ ಸಾಥ್ ಹೈ ಸಿನೆಮಾದ ಸಹ-ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ನೀಲಂ ಮತ್ತು ಟಬು ಅವರ ಮೇಲೂ ವನ್ಯಜೀವಿ (ರಕ್ಷಣೆ) ಕಾಯ್ದೆಯ ಸೆಕ್ಷನ್ 51 ರ ಅಡಿಯಲ್ಲಿ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 149 (ಕಾನೂನುಬಾಹಿರ ಸಭೆ) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಆದರೆ, ನಂತರ ಅವರನ್ನು ದೋಷಮುಕ್ತಗೊಳಿಸಲಾಯಿತು.

ಇಂದಿನ ಪ್ರಮುಖ ಸುದ್ದಿ :-   5 ಮತ್ತು 8ನೇ ತರಗತಿಗೆ ಬೋರ್ಡ್​ ಪರೀಕ್ಷೆ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಮೇಲ್ಮನವಿ, ಅರ್ಜಿ ಆಲಿಸಲು ಸಮ್ಮತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement