ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಕ್ಕೆ ಇಬ್ಬರು ಸಜೀವ ದಹನ, ಮೂವರಿಗೆ ಗಾಯ

ಉಡುಪಿ: ಕಾಪು ಸಮೀಪದ ಮಲ್ಲಾರುವಿನ ಫಕೀರನ ಕಟ್ಟೆಯಲ್ಲಿದ್ದ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡು, ಮೂವರು ಗಾಯಗೊಂಡ ಘಟನೆ ಸೋಮವಾರ (ಮಾರ್ಚ್‌ ೨೧) ನಡೆದಿದೆ.

ಮೃತರನ್ನು ರಜಾಕ್ ಹಾಗೂ ಅಂಗಡಿಯ ಪಾಲುದಾರರಾದ ರಜಬ್ ಎಂದು ಹೇಳಲಾಗಿದೆ.
ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅದರಲ್ಲಿ ಒಬ್ಬರು ಗ್ರಾಪಂ ಸದಸ್ಯರೂ ಇದ್ದಾರೆ ಎಂದು ಹೇಳಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಗಾಯಗೊಂಡ ಮೂವರಲ್ಲಿ ಒಬ್ಬನನ್ನು ಹಸನಬ್ಬ ಎಂದು ಗುರುತಿಸಲಾಗಿದ್ದು, ಈತ ಈ ಸ್ಕ್ರ್ಯಾಪ್ ಡೀಲಿಂಗ್ ಅಂಗಡಿಯಲ್ಲಿ ಪಾಲುದಾರನಾಗಿರುತ್ತಾನೆ. ಅಂಗಡಿಯಲ್ಲಿ ಮುರುಕು ವಸ್ತು ಎಂದು ಇಟ್ಟುಕೊಂಡಿದ್ದ ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಅಂಗಡಿಯಲ್ಲಿ ಹಳೆಯ ಫ್ರಿಡ್ಜ್‌ನಂತಹ ಇತರ ಸ್ಕ್ರ್ಯಾಪ್ ವಸ್ತುಗಳನ್ನು ಕೂಡ ಇರಿಸಲಾಗಿದ್ದು, ಬೆಂಕಿ ವೇಗವಾಗಿ ಹರಡಿದ್ದರಿಂದ ಎಲ್ಲಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ನಷ್ಟ ಅಂದಾಜಿಸಲಾಗುತ್ತಿದೆ. ಉಡುಪಿಯಿಂದ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಮತ್ತು ಮತ್ತಷ್ಟು ಹರಡುವುದನ್ನು ನಿಲ್ಲಿಸಿವೆ.
ಗುಜರಿಯಲ್ಲಿಡಲಾಗಿದ್ದು ಹಳೆಯ ವಸ್ತುಗಳಿಗೆ ಬೆಂಕಿ ಹತ್ತಿಕೊಂಡಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಉಡುಪಿ ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ. ಕಾಪು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪ್ರಮುಖ ಸುದ್ದಿ :-   ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ; 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೇರಿ ಮೂವರು ಅರೆಸ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement