ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಸಲಹೆಗಾರ ಫಾರೂಕ್ ಖಾನ್ ರಾಜೀನಾಮೆ, ಬಿಜೆಪಿಯಲ್ಲಿ ಪ್ರಮುಖ ಹುದ್ದೆ ನೀಡುವ ಸಾಧ್ಯತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಅವರ ಸಲಹೆಗಾರ ಫಾರೂಕ್ ಖಾನ್ ರಾಜೀನಾಮೆ ನೀಡಿದ್ದು, ಬಿಜೆಪಿಯಲ್ಲಿ ಅವರು ದೊಡ್ಡ ಜವಾಬ್ದಾರಿ ಪಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಸಲಹೆಗಾರ ಫಾರೂಕ್ ಖಾನ್ ಭಾನುವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದಾರೆ. 1990ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಖಾನ್ ಅವರಿಗೆ ಬಿಜೆಪಿಯಲ್ಲಿ “ಪ್ರಮುಖ ಹುದ್ದೆ” ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶದಲ್ಲಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಿದ್ಧಪಡಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸುವ ಸಾಧ್ಯತೆ ಇದೆ. ಅವರು ಈ ಹಿಂದೆ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು ಮತ್ತು ಪಕ್ಷದ ಅಲ್ಪಸಂಖ್ಯಾತರ ಸೆಲ್‌ನಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.
ಚುನಾವಣಾ ವೇಳಾಪಟ್ಟಿಯನ್ನು ಇನ್ನೂ ಪ್ರಕಟಿಸದಿದ್ದರೂ, ಮೇ ತಿಂಗಳೊಳಗೆ ನಡೆಯುತ್ತಿರುವ ಡಿಲಿಮಿಟೇಶನ್ ಕಸರತ್ತು ಮುಗಿದ ನಂತರ ಅಕ್ಟೋಬರ್ ನಂತರ ಚುನಾವಣೆ ನಡೆಯಲಿದೆ ಎಂದು ಅಧಿಕಾರಿಗಳು ನಿರೀಕ್ಷಿಸಿದ್ದಾರೆ.

ಪ್ರಮುಖ ಸುದ್ದಿ :-   'ತಾರಕ್ ಮೆಹ್ತಾ' ನಟ ಗುರುಚರಣ್ ಸಿಂಗ್ ಐದು ದಿನಗಳಿಂದ ನಾಪತ್ತೆ ; ಸಿಸಿಟಿವಿಯಲ್ಲಿ ರಸ್ತೆ ದಾಟುತ್ತಿರುವುದು ಸೆರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement