ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ: ಕರಾವಳಿ, ಮಲೆನಾಡಲ್ಲಿ ಹೈ ಅಲರ್ಟ್‌..!

ಬೆಂಗಳೂರು: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್‌ 24ರ ವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಮಾರ್ಚ್‌ 24 ಮತ್ತು 25ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಾರ್ಚ್‌ 25ರ ವರೆಗೆ ಹಾಗೂ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮಾರ್ಚ್‌ 25ರಂದು ಮಾತ್ರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement