ಬಸ್‌-ಕಾರಿನ​ ನಡುವೆ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸಾವು

posted in: ರಾಜ್ಯ | 0

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಹಾಸನ – ಬೇಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಆಲ್ಟೊ ಕಾರು ನಡುವೆ ಡಿಕ್ಕಿ ಸಂಭವಿಸಿ ಐವರು ಯುವಕರು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಮೃತಪರನ್ನು ವಿದ್ಯಾರ್ಥಿಗಳಾದ ಅಕ್ಮಲ್(18), ಜಿಲಾನಿ(19), ತೋಹಿದ್(18), ಕೈಫ್ (18) ಎಂಬವರು ಸ್ಥಳದಲ್ಲೇ ಮೃತಪಟ್ಟರೆ, ರಿಹಾನ್ (19) ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದಲ್ಲಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಬೇಲೂರು ಪಟ್ಟಣದ ನಿವಾಸಿಗಳು ಎಂದು ಹೇಳಲಾಗಿದೆ.
ಕೆಎಸ್‌ಆರ್ ಟಿಸಿ ಬಸ್ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿತ್ತು ಹಾಗೂ ಕಾರ್‌ ಬೇಲೂರಿನಿಂದ ಹಾಸನಕ್ಕೆ ಬರುತ್ತಿತ್ತು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿ, ನಾಲ್ವರ ಶವಗಳನ್ನ ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ರಾಜ್ಯದಲ್ಲಿ ಧಾರಾಕಾರ ಮಳೆ: ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ
advertisement

ನಿಮ್ಮ ಕಾಮೆಂಟ್ ಬರೆಯಿರಿ