ಬೆಂಗಳೂರಲ್ಲಿ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಇಂದು, ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ಲಂಚದ ಆಮಿಷವೊಡ್ಡಿ ಮತ್ತು ಪ್ರಭಾವ ಬೀರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ 9 ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಎಸ್ಪಿ ಉಮಾ ಪ್ರಶಾಂಶ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ 9 ಕಡೆ ದಾಳಿ ಮಾಡಲಾಗಿದೆ.
ಟಿವಿ 9 ಕನ್ನಡ.ಕಾಮ್‌ ವರದಿ ಪ್ರಕಾರ, ಚಾಮರಾಜಪೇಟೆಯ ಬಿ.ಎನ್.ರಘು, R.T.ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್​ನ ಲಕ್ಷ್ಮಣ ಎಂಬವರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement