ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಿಎಂ ಉದ್ಧವ್ ಠಾಕ್ರೆ ಪತ್ನಿ ಸಹೋರದನ ಕಂಪನಿ ಮೇಲೆ ಇಡಿ ದಾಳಿ, ಆಸ್ತಿ ಮುಟ್ಟುಗೋಲು

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪತ್ನಿಯ ಸಹೋದರನ ಒಡೆತನದ ಕಂಪನಿಯ 6.45 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ತಿಳಿಸಿದೆ.
ಶ್ರೀಧರ್ ಮಾಧವ್ ಪಾಟಂಕರ್ ಒಡೆತನದ ಶ್ರೀ ಸಾಯಿಬಾಬಾ ಗೃಹನಿರ್ಮಿತಿ ಪ್ರೈವೇಟ್ ಲಿಮಿಟೆಡ್‌ನ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿ ಮಾಡಲಾಗಿದೆ ಎಂದು ಇಡಿ ಹೇಳಿಕೆ ತಿಳಿಸಿದೆ.

ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಶ್ರೀ ಸಾಯಿಬಾಬಾ ಗೃಹನಿರ್ಮಿತಿ ಪ್ರೈವೇಟ್ ಲಿಮಿಟೆಡ್‌ನ ಮುಂಬೈ ಸಮೀಪದ ಥಾಣೆಯಲ್ಲಿರುವ ನೀಲಾಂಬರಿ ಯೋಜನೆಯಲ್ಲಿ 11 ವಸತಿ ಫ್ಲಾಟ್‌ಗಳನ್ನು ಲಗತ್ತಿಸಲು ಜಾರಿ ನಿರ್ದೇಶನಾಲಯವು ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ. ಠಾಕ್ರೆಯವರ ಪತ್ನಿ ರಶ್ಮಿಯವರ ಸಹೋದರರಾದ ಪಾಟನಕರ್, ಶ್ರೀ ಸಾಯಿಬಾಬಾ ಗೃಹನಿರ್ಮಿತಿ ಪ್ರೈವೇಟ್ ಲಿಮಿಟೆಡ್ ಅನ್ನು “ಮಾಲೀಕತ್ವ ಮತ್ತು ನಿಯಂತ್ರಣ” ಹೊಂದಿದ್ದಾರೆ.

ಪುಷ್ಪಕ್ ಬುಲಿಯನ್ ಎಂಬ ಕಂಪನಿಯ ವಿರುದ್ಧ ತನಿಖೆ ನಡೆಸಲಾಗುತ್ತಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಲೂಟಿ ಮಾಡಲಾಗಿದೆ ಎಂದು ಹೇಳಲಾದ ಹಣವನ್ನು ಶ್ರೀ ಸಾಯಿಬಾಬಾ ಗೃಹನಿರ್ಮಿತಿ ಪ್ರೈವೇಟ್ ಲಿಮಿಟೆಡ್‌ನ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ “ಹೂಡಿಕೆ ಮಾಡಲಾಗಿದೆ ಎಂದು ಕಾನೂನು ಜಾರಿ ಸಂಸ್ಥೆ ಹೇಳಿದೆ.
ಠಾಕ್ರೆ ಅವರ ಪತ್ನಿ ಸಹೋದರನ ವಿರುದ್ಧ ಇಡಿ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಶಿವಸೇನಾ ಸಂಸದ ಸಂಜಯ್ ರಾವುತ್, ಕೇಂದ್ರೀಯ ಏಜೆನ್ಸಿಯ ಮೂಲಕ ಬಿಜೆಪಿಯು ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ ಇಂತಹ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಈ ಕ್ರಮದ ಹಿಂದೆ ರಾಜಕೀಯ ದುದ್ದೇಶವಿದೆ ಎಂದು ಆರೋಪಿಸಿದ್ದಾರೆ, “ಈ ಏಜೆನ್ಸಿಗಳ (ಕೇಂದ್ರ ಏಜೆನ್ಸಿಗಳು) ದುರುಪಯೋಗ ಇಂದು ರಾಷ್ಟ್ರವು ಎದುರಿಸುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ಕೆಲವು ವ್ಯಕ್ತಿಗಳಿಗೆ ಕಿರುಕುಳ ನೀಡಲು ರಾಜಕೀಯ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement