ಪುನೀತ ರಾಜಕುಮಾರಗೆ ಮೈಸೂರು ವಿವಿಯಿಂದ ಮರಣೋತ್ತರ ಡಾಕ್ಟರೇಟ್ ಪ್ರದಾನ

ಮೈಸೂರು ವಿ.ವಿ ಘಟಿಕೋತ್ಸವ: ಪುನೀತ್‌ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್‌ ಪ್ರದಾನ
ಮೈಸೂರು: ವಿಜ್ಞಾನಿ ‌ಡಾ.ವಿ.ಕೆ.ಆತ್ರೆ, ನಟ ಪುನೀತ್‌ ರಾಜ್‌ಕುಮಾರ್‌ (ಮರಣೋತ್ತರ) ಹಾಗೂ ಜಾನಪದ ಕಲಾವಿದ ಎಂ.ಮಹಾದೇವಸ್ವಾಮಿ ಅವರಿಗೆ ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು.

ಮಂಗಳವಾರ ಕ್ರಾಫರ್ಡ್‌ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಪ್ರದಾನ ಮಾಡಿದರು. ಪುನೀತ್‌ ಪರವಾಗಿ ಅವರ ಪತ್ನಿ ಅಶ್ವಿನಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.

ನಮ್ಮ ತಂದೆಗೂ ಡಾಕ್ಟರೇಟ್‌ ದೊರೆತಿದ್ದು 47 ವರ್ಷಕ್ಕೆ

ಘಟಿಕೋತ್ಸವದಲ್ಲಿ ಮಾತನಾಡಿದ ರಾಘವೇಂದ್ರ ರಾಜಕುಮಾರ, ನಮ್ಮ ತಂದೆ ಡಾ.ರಾಜ್ ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿದಾಗ ಅವರಿಗೆ 47 ವರ್ಷ. ಆದರೆ‌ ಇದೀಗ ಪುನೀತ್ ರಾಜ್‍ ಕುಮಾರ್ ಸಿಕ್ಕಾಗಲೂ 47 ವರ್ಷ ಎಂದು ರಾಘವೇಂದ್ರ ರಾಜಕುಮಾರ್ ಭಾವುಕರಾಗಿ ಮಾತನಾಡಿದರು.
1976 ರಲ್ಲಿ ಅಪ್ಪಾಜಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿತು. ಆಗ ಅವರಿಗೆ 47 ವರ್ಷ, ಪುನೀತ 9 ತಿಂಗಳ ಮಗು. ಇದೀಗ ಮೈಸೂರು ವಿಶ್ವವಿದ್ಯಾನಿಲಯ ಪುನೀತ್ ರಾಜ್‍ಕುಮಾರ್ ಗೆ ಗೌರವ ಡಾಕ್ಟರೇಟ್ ನೀಡಿದೆ. ಅವನಿಗೆ ಈಗ 47 ವರ್ಷ ಎಂದು ಭಾವುಕರಾದರು.
ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಪರಿಷತ್‌ನ (ನ್ಯಾಕ್‌) ನಿರ್ದೇಶಕ ಪ್ರೊ.ಎಸ್‌.ಸಿ.ಶರ್ಮ, ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಇದ್ದರು.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement