137 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ…ಅಡುಗೆ ಅನಿಲ ಸಿಲಿಂಡರ್ ದರದಲ್ಲಿಯೂ ಏರಿಕೆ

ನವದೆಹಲಿ: ನಾಲ್ಕೂವರೆ ತಿಂಗಳ ಬಳಿಕ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿಲೀಟರಿಗೆ 80 ಪೈಸೆ ಹೆಚ್ಚಳ ಮಾಡಲಾಗಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆ ಮಾಡಲಾಗಿದೆ

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 96.21 ರೂ., ಡೀಸೆಲ್ ಲೀಟರ್​ಗೆ 87.47 ರೂ., ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.42 ರೂ. ಹಾಗೂ ಲೀಟರ್ ಡೀಸೆಲ್ ದರ 85.80 ರೂ.ಗಳಾಗಿದೆ.
ಚೆನ್ನೈನಲ್ಲಿ ಪೆಟ್ರೋಲ್ ಲೀಟರ್​ಗೆ 102.16 ರೂ., ಡೀಸೆಲ್​ ಲೀಟರ್​ಗೆ 92.19 ರೂ., ಮುಂಬೈನಲ್ಲಿ ಲೀಟರ್​ಗೆ ಪೆಟ್ರೋಲ್ ಬೆಲೆ 110.82 ರೂ. ಲೀಟರ್ ಡೀಸೆಲ್ ಬೆಲೆ 95 ರೂ. ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.51 ರೂ.ಗಳಾಗಿದ್ದರೆ ಡೀಸೆಲ್ ಬೆಲೆ ಲೀಟರ್​ಗೆ 90.62 ರೂ.ಗಳಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 109.10 ರೂ. ಲೀಟರ್ ಡೀಸೆಲ್ ದರ 95.50 ರೂ.ಗಳಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 96.06 ರೂ. ಹಾಗೂ ಲೀಟರ್ ಡೀಸೆಲ್ ದರ 90.09 ರೂ.ಗಳಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲಿಗೆ 107.12 ರೂ.ಗಳಾದರೆ, ಲೀಟರ್ ಡೀಸೆಲ್ ಬೆಲೆ 94.22 ರೂ.ಗಳಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.08 ರೂ.ಗಳಾಗದರೆ ಹಾಗೂ ಲೀಟರ್ ಡೀಸೆಲ್ ದರ 87.61 ರೂ.ಗಳಿಗೆ ನಿಗದಿಯಾಗಿದೆ.
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆ ಮಾಡಲಾಗಿದೆ. 14.2 ಕೆಜಿಯ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 949.50 ರೂ. ಆಗಿದೆ. ಇಂದಿನಿಂದಲೇ ಅನ್ವಯವಾಗುವಂತೆ (ಮಾರ್ಚ್ 22, 2022) ಈ ದರ ಏರಿಕೆ ಮಾಡಲಾಗಿದೆ.ಅಕ್ಟೋಬರ್ 2021 ರಿಂದ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಇದು ಮೊದಲ ಬೆಲೆ ಏರಿಕೆಯಾಗಿದೆ

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ಉಕ್ರೇನ್‌ -ರಷ್ಯಾ ಯುದ್ಧದ ನಂತರ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾದ ನಂತರ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆಯಾಗಿದೆ.
ಸೋಮವಾರ ಭಾರತದಲ್ಲಿ ಡೀಸೆಲ್ ಸಗಟು ಖರೀದಿ ದರ ಲೀಟರ್​ಗೆ 25 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಅಂತಾರಾಷ್ಟ್ರೀಯ ತೈಲ ದರವು ಶೇಕಡಾ 40 ರಷ್ಟು ಹೆಚ್ಚಳವಾಗಿದೆ. ಬಲ್ಕ್ ಆಗಿ, ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಇದು ಅನ್ವಯವಾಗಿತ್ತು.
ಮಾರ್ಚ್ 10 ರಂದು ಚುನಾವಣಾ ಫಲಿತಾಂಶಗಳು ಹೊರಬಂದ ನಂತರ ಬೆಲೆ ಏರಿಕೆಯನ್ನು ನಿರೀಕ್ಷಿತವಾಗಿತ್ತು, ಆದಾಗ್ಯೂ, ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಹಿನ್ನೆಲೆಯಲ್ಲಿ ಕ್ರಮವು ವಿಳಂಬವಾಗಿರಬಹುದು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement