ರಾಜ್ಯಾದ್ಯಂತ ಯುಗಾದಿ ಹಬ್ಬವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಲು ಮುಜರಾಯಿ‌ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಣೆ ಮಾಡಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಮುಜರಾಯಿ‌ ಸಚಿವೆ ಶಶಿಕಲಾ ಜೊಲ್ಲೆ‌ ಸೂಚನೆ ನೀಡಿದ್ದಾರೆ.
ಚಾಂದ್ರಮಾನ ಮತ್ತು ಸೌರಮಾನ ಯುಗಾದಿಯ ದಿನಗಳಂದು ಇಲಾಖಾ ವ್ಯಾಪ್ತಿಯ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆ ಆಚರಿಸುವಂತೆ ಸೂಚನೆ ಮುಜರಾಯಿ‌ ಸಚಿವೆ ಶಶಿಕಲಾ ಜೊಲ್ಲೆ‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸೂಕ್ತ ಸುತ್ತೋಲೆ ಹೊರಡಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಸಚಿವೆ ಸೂಚನೆ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಇದೇ ಸಂದರ್ಭದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ರಾಜ್ಯದ ದೇವಾಲಯಗಳಲ್ಲಿ ಕೈಗೊಳ್ಳಲು‌ ಕೂಡಾ ಸೂಚನೆ ನೀಡಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆ ಧಾರ್ಮಿಕ ಹಿನ್ನೆಲೆ ಹೊಂದಿರುವ ಇಲಾಖೆಯಾಗಿರುವುದರಿಂದ ವರ್ಷದಲ್ಲಿ ಒಂದು ದಿನವನ್ನು ಧಾರ್ಮಿಕ ದಿನವೆಂಬ ಹೆಸರಿನಿಂದ ಆಚರಣೆ ಮಾಢುವುದು ಸೂಕ್ತ ಎನ್ನುವುದು ನಮ್ಮ ಆಲೋಚನೆಯಾಗಿತ್ತು. ಆದರೆ ರಾಜ್ಯದ ಕೆಲವು ಭಾಗಗಳಲ್ಲಿ ಚಾಂದ್ರಮಾನ ಯುಗಾದಿ, ಇನ್ನು ಕೆಲವು ಭಾಗಗಳಲ್ಲಿ ಸೌರಮಾನ ಯುಗಾದಿಯನ್ನು ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರತಿವರ್ಷ ಶುಭಕೃತ್‌ ನಾಮ ಸಂವತ್ಸರ ಚಾಂದ್ರಮಾನ ಹಾಗೂ ಸೌರಮಾನ ಯುಗಾದಿಯ ದಿನಗಳಂದು ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆಯನ್ನು ಆಚರಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.
ದೇವಾಲಯಗಳಲ್ಲಿ ಪಂಚಾಂಗ ಶ್ರವಣ, ಹರಿಕಥೆ, ವಿಶೇಷ ಪೂಜೆ, ಭಜನೆ, ಪ್ರಸಾದ ವಿತರಣೆ ಮುಂತಾದ ಕಾರ್ಯಕ್ರಮ ಹಮ್ಮಿಕೊಂಡು ಧಾರ್ಮಿಕ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಸೂಚನೆ ನೀಡಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement