ಸತತ ಎರಡನೇ ದಿನವೂ ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ ಏರಿಕೆ

ನವದೆಹಲಿ: ಇಂದು (ಮಾ.23) ಮತ್ತೆ ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ 80 ಪೈಸೆ ಹೆಚ್ಚಳವಾಗಿde. ಎರಡು ದಿನಗಳಲ್ಲಿ 1.60 ರೂ.ಗಳು ಹೆಚ್ಚಳವಾದಂತಾಗಿದೆ.
ನಾಲ್ಕೂವರೆ ತಿಂಗಳ ಬಳಿಕ ನಿನ್ನೆ ಸೋಮವಾರ (ಮಾ.22) ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ 80 ಪೈಸೆಗಳಷ್ಟು ಏರಿಕೆಯಾಗಿತ್ತು.
ಉಕ್ರೇನ್​-ರಷ್ಯಾ ಯುದ್ಧದಿಂದ ಖಾದ್ಯ ತೈಲ ಮತ್ತು ಗೋಧಿ ಸೇರಿದಂತೆ ಕೆಲವೊಂದು ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಇದೀಗ ಇಂಧನ ದರ ಮತ್ತೊಮ್ಮೆ ಏರಿಕೆಯಾಗಿರುವು ಅಗತ್ಯ ವಸ್ತುಗಳ ಬೆಲೆ ಏರಿಕೆ ಕಾವು ಮತ್ತೊಮ್ಮೆ ಹೆಚ್ಚಾಗಲಿದ್ದು, ಸಾಮಾನ್ಯ ಜನರ ಜೇಬಿಗೆ ಮತ್ತಷ್ಟು ಹೊರೆಯಾಗಲಿದೆ.
ಇಂದು, ಮಂಗಳವಾರ ಬೆಳಗ್ಗೆ 6 ಗಂಟೆಯಿಂದಲೇ ದರ ಏರಿಕೆ ಪರಿಷ್ಕರಣೆಯಾಗಿದ್ದು, ಇಂದಿನ ಇಂಧನ ದರ ಈ ಕೆಳಗಿನಂತಿದೆ.

ಬೆಂಗಳೂರು

ಲೀಟರ್ ಪೆಟ್ರೋಲ್ ದರ 101.42 ರೂ.ಗಳು, ಲೀಟರ್ ಡೀಸೆಲ್ ದರ 85.80 ರೂ.ಗಳು

ದೆಹಲಿ
ಪೆಟ್ರೋಲ್​: ಪ್ರತಿ ಲೀಟರ್​ಗೆ 97.01 ರೂಪಾಯಿ, ಡೀಸೆಲ್​: ಪ್ರತಿ ಲೀಟರ್​ಗೆ 88.27 ರೂ.

ಮುಂಬೈ
ಪೆಟ್ರೋಲ್​: 111.58 ರೂ., ಡೀಸೆಲ್​: 95.74 ರೂ.

ಚೆನ್ನೈ
ಪೆಟ್ರೋಲ್​: 102.96 ರೂ., ಡೀಸೆಲ್​: 92.99 ರೂ.

ಪ್ರಮುಖ ಸುದ್ದಿ :-   ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

ಕೋಲ್ಕತ್ತಾ
ಪೆಟ್ರೋಲ್​: 106.31 ರೂ., ಡೀಸೆಲ್​: 91.42 ರೂ.

ಪಂಚ ರಾಜ್ಯ ಚುನಾವಣೆ ಚುನಾವಣೆ ಮುಗಿದ ನಂತರ ಇಂಧನ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಅದರಂತೆಯೇ ಏರಿಕೆಯಾಗುತ್ತಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ದೇಶವಾಘಿದ್ದು, ಭಾರತ ತನ್ನ ತೈಲ ಅಗತ್ಯದ ಸುಮಾರು 85% ನಷ್ಟು ಭಾಗವನ್ನು ಸಾಗರೋತ್ತರ ಮಾರುಕಟ್ಟೆಗಳಿಂದ ತರಿಸಿಕೊಳ್ಳುತ್ತಿದೆ.
ರಷ್ಯಾ ಮತ್ತು ಉಕ್ರೇನ್​ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚ್ಛಾ ತೈಲದ ಬೆಲೆ ಏರಿಕೆಯಾಗಿ ಜಾಗತಿಕ ತೈಲ ಬೆಲೆಗಳ ಮೇಲೆ ಗಣನೀಯ ಪ್ರಭಾವ ಬೀರಿದೆ. ಅಲ್ಲದೆ, ಅಮೆರಿಕ​ ಡಾಲರ್​ ಎದುರು ರೂಪಾಯಿ ಮೌಲ್ಯ ಕುಸಿದಿರುವುದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement