ಹೈದರಾಬಾದ್ : ಗೋದಾಮಿನಲ್ಲಿ ಬೆಂಕಿ ಅವಘಡ, 11 ಮಂದಿ ವಲಸೆ ಕಾರ್ಮಿಕರು ಸುಟ್ಟು ಕರಕಲು

ಹೈದರಾಬಾದ್‌: ಹೈದರಾಬಾದ್‌ನ ಭೋಯಿಗುಡಾ ಪ್ರದೇಶದಲ್ಲಿ ಕಬ್ಬಿಣ ಮತ್ತು ಪ್ಲಾಸ್ಟಿಕ್‌ ಚೂರುಪಾರುಗಳನ್ನು ಸಂಗ್ರಹಿಸುವ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿ ಕನಿಷ್ಠ 11 ಮಂದಿ ವಲಸೆ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ.
ಒಬ್ಬ ವ್ಯಕ್ತಿ ತ ಕಿಟಕಿಯನ್ನು ಒಡೆದು ಹೊರಬಂದು ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದಾನೆ. ಸದ್ಯ ಅವರು ಸಿಕಂದರಾಬಾದ್‌ನ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಗಂಭೀರವಾಗಿದೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ, ಬೆಂಕಿ ಅವಘಡದಲ್ಲಿ ಬಿಹಾರ ಮೂಲದ ವಲಸೆ ಕಾರ್ಮಿಕರು ಸುಟ್ಟುಹೋಗಿದ್ದಾರೆ. ಬೆಳಗಿನಜಾವ 4ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ. ಆ ಸಮಯದಲ್ಲಿ ಸುಮಾರು 13 ಮಂದಿ ಕಾರ್ಮಿಕರು ಗೋದಾಮಿನ ಮೇಲಿನ ಮಹಡಿಯಲ್ಲಿ ನಿದ್ರಿಸುತ್ತಿದ್ದರು. ಗೋದಾಮು ಸಿಕಂದರಾಬಾದ್‌ ರೈಲ್ವೆ ನಿಲ್ದಾಣಕ್ಕೆ ಸಮೀಪದ ವಸತಿ ಪ್ರದೇಶದಲ್ಲಿದೆ.

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿರಬಹುದೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ಕೇಂದ್ರ ವಲಯದ ಪ್ರಕಾರ, ಮೃತರ ದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಮತ್ತು ಸಿಕಂದರಾಬಾದ್‌ನ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಂತ್ರಸ್ತರನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮೃತಪಟ್ಟ ಹನ್ನೊಂದು ವಲಸೆ ಕಾರ್ಮಿಕರಲ್ಲಿ ಹತ್ತು ಮಂದಿ ಬಿಹಾರದ ಅಜಂಪುರ ಗ್ರಾಮದವರು. ಅವರು ಒಂದೂವರೆ ವರ್ಷದ ಹಿಂದೆ ಗೋಡೌನ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ್ದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ಪ್ರಧಾನಿ ಮೋದಿ ಸಂತಾಪ…
ಮೃತರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. “ಹೈದರಾಬಾದ್‌ನ ಭೋಯಿಗುಡಾದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿ ದುಃಖಕರವಾಗಿದೆ. ಈ ಶೋಕಾಚರಣೆಯ ಅವಧಿಯಲ್ಲಿ ನಾನು ಮೃತರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ನೀಡಲಾಗುವುದು” ಎಂದು ಅವರು ಹೇಳಿದರು.

5 ಲಕ್ಷ ರೂ.ಎಕ್ಸ್ ಗ್ರೇಷಿಯಾ ಘೋಷಿಸಿದ ತೆಲಂಗಾಣ ಸಿಎಂ
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಇದಲ್ಲದೆ, ಶವಗಳನ್ನು ಬಿಹಾರಕ್ಕೆ ಹಿಂದಿರುಗಿಸಲು ವ್ಯವಸ್ಥೆ ಮಾಡುವಂತೆ ಅವರು ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರಿಗೆ ಸೂಚಿಸಿದರು. ಸೋಮೇಶ್ ಕುಮಾರ್ ಮತ್ತು ಸಚಿವ ಟಿ ಶ್ರೀನಿವಾಸ್ ಯಾದವ್ ಬುಧವಾರ ಬೆಳಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿದರು.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಕೆ ಕೃಷ್ಣ ಸಾಗರ್ ರಾವ್, ‘‘ಘಟನೆ ಕುರಿತು ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ತೆಲಂಗಾಣ ಬಿಜೆಪಿ ಕೂಡ ಮೃತರ ಕುಟುಂಬಗಳಿಗೆ ತಲಾ 50 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದೆ.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement