ಬೆಂಗಳೂರು: ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 571 ಬಾಲ್ಯ ವಿವಾಹಗಳು ನಡೆದಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಮಂಡ್ಯ ಜಿಲ್ಲೆಯಲ್ಲಿ ಅತ್ಯಧಿಕ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಉಪ ನಾಯಕ ಕೆ. ಗೋವಿಂದರಾಜ್ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಉತ್ತರ ನೀಡಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
2018-19 ರಿಂದ 2020-21ರ ತನಕ ರಾಜ್ಯದಲ್ಲಿ 571 ಬಾಲ್ಯ ವಿವಾಹಗಳು ನಡೆದಿವೆ. 417 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ ಯಾವುದೇ ಬಾಲ್ಯ ವಿವಾಹ ಪ್ರಕರಣ ದಾಖಲಾಗಿಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಅಪರಾಧ ಪ್ರಕರಣಗಳ ಬ್ಯರೊ (ಎನ್‌ಸಿಆರ್‌ಬಿ) ವರದಿಯ ಪ್ರಕಾರ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ 2108-19ರಲ್ಲಿ 119, 2019-20ರಲ್ಲಿ 156 ಮತ್ತು 2020-21ರಲ್ಲಿ 296 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ ಎಂದು ಸಚಿವರು ತಿಳಿಸಿದರು.
ಮೂರು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ 59 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ರಾಮನಗರದಲ್ಲಿ 51, ಹಾಸನದಲ್ಲಿ 42, ಮೈಸೂರು 38, ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ 37 ಬಾಲ್ಯ ವಿವಾಹಗಳು ನಡೆದಿವೆ. ಬಾಲ್ಯ ವಿವಾಹವನ್ನು ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಶಿಶು ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಹಾಗೂ ಹೋಬಳಿ ಮಟ್ಟದಲ್ಲಿನ ಬಾಲ್ಯ ವಿವಾಹ ತಡೆಗಟ್ಟುವ ಸಮಿತಿ ರಚನೆ ಮಾಡಲಾಗಿದೆ.
ನಿಯಮಗಳನ್ನು ಉಲ್ಲಂಘಿಸಿ ಬಾಲ್ಯ ವಿವಾಹಕ್ಕೆ ಪ್ರೇರೇಪಣೆ ನೀಡುವವರನ್ನು ಕಾನೂನಿನ ಕಠಿಣ ಕ್ರಮಕ್ಕೆ ಒಳಪಡಿಸಲು ಸಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ