ಬಿರ್ಭೂಮ್ ಹಿಂಸಾಚಾರ: ಎಂಟು ಮಂದಿಗೆ ಥಳಿಸಿದ ನಂತರ ಸಜೀವದಹನ-ಶವ ಪರೀಕ್ಷೆ ವರದಿಯಲ್ಲಿ ಬಹಿರಂಗ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್‌ನಲ್ಲಿ ಟಿಎಂಸಿ ಮುಖಂಡನ ಹತ್ಯೆಗೆ ಪ್ರತೀಕಾರವಾಗಿ ಎಂಟು ಮಂದಿಯನ್ನು ಥಳಿಸಿ ಬಳಿಕ ಸಜೀವದಹನ ಮಾಡಲಾಗಿದೆ ಎಂದು ಶವ ಪರೀಕ್ಷೆ ವರದಿಯಲ್ಲಿ ಬಹಿರಂಗವಾಗಿದೆ.
ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಮಾರ್ಚ್ 21 ರಂದು ಸಂಜೆ ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯಾಗಿತ್ತು. ಮುಖಂಡ ಮೃತಪಟ್ಟ ಸುದ್ದಿ ತಿಳಿದು ರೊಚ್ಚಿಗೆದ್ದ ಅವರ ಬೆಂಬಲಿಗರ ಗುಂಪೊಂದು ಆ ಗ್ರಾಮದಲ್ಲಿರುವ ವಿರೋಧಿ ಗುಂಪಿನ ಕೆಲವರ ಮನೆಗಳ ಮೇಲೆ ದಾಳಿ ನಡೆಸಿ ಮನೆಗಳಿಗೆ ಬೆಂಕಿ ಹಚ್ಚಿದ್ದರು ಎಂದು ಹೇಳಲಾಗಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಸಜೀವದಹನವಾಗಿದ್ದರು. ಈಗ ಶವ ಪರೀಕ್ಷೆ ವರದಿ ಬಂದಿದ್ದು, ಸಜೀವದಹನ ಮಾಡುವ ಮುನ್ನ ಅವರನ್ನು ದುಷ್ಕರಮಿಗಳು ಮನಬಂದಂತೆ ಥಳಿಸಿದ್ದಾರೆ ಎಂದು ವರದಿಯಲ್ಲಿ ತಿಳಿದುಬಂದಿದೆ. ಘಟನೆಯಲ್ಲಿ ಸುಮಾರು 12 ಮನೆಗಳು ಸುಟ್ಟು ಕರಕಲಾಗಿದ್ದವು.
ಘಟನೆಗೆ ಸಂಬಂಧಿಸಿದಂತೆ 20 ಮಂದಿಯನ್ನು ಬಂಧಿಸಲಾಗಿದ್ದು, ಉಳಿದವರಿಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

advertisement

ನಿಮ್ಮ ಕಾಮೆಂಟ್ ಬರೆಯಿರಿ