ಬೆಂಗಳೂರು: ಬೆಂಗಳೂರಿನ ಮಂಗನಹಳ್ಳಿ ಸೇತುವೆ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ನಿನ್ನೆ, ಬುಧವಾರ ಮಧ್ಯಾಹ್ನ ಮಗಳ ಮದುವೆ ಕಾರ್ಯಕ್ರಮವಿದ್ದ ಕಾರಣ ಕಲ್ಯಾಣ ಮಂಟಪ ಬುಕ್ ಮಾಡಿ ಹಿಂತಿರುಗುತ್ತಿದ್ದಾಗ ಅಪ್ಪ-ಮಗಳು ಬೈಕ್‍ನಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ಮಂಗನಹಳ್ಳಿ ಸೇತುವೆ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಆಯಿಲ್ ಸಿಡಿದು ಇವರಿಬ್ಬರಿಗೆ ಬೆಂಕಿ ಹೊತ್ತುಕೊಂಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಟ್ರಾನ್ಸ್‌ಫಾರ್ಮರ್ ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಭಸ್ಮವಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ತಂದೆ ಶಿವರಾಜು, ಮಗಳು ಚೈತನ್ಯರನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದರು. ತಂದೆ ಶಿವರಾಜ್ (55) ಚೈತನ್ಯ(19) ಇಬ್ಬರೂ ಕೂಡಾ ಮೃತಪಟ್ಟಿದ್ದಾರೆ.
ನಗರದ ಉಳ್ಳಾಲ ಪ್ರದೇಶದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ತಂದೆ ಶಿವರಾಜ್ (55) ಬುಧವಾರ ಮೃತಪಟ್ಟಿದ್ದಾರೆ ಹಾಗೂ ಚೈತನ್ಯ ಗುರುವಾರ ಬೆಳಗಿನ ಜಾವ 2 ಗಂಟೆಗೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಈ ಘಟನೆ ಸಂಬಂಧ ಶಿವರಾಜು ಸಂಬಂಧಿಕರು ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ