ದೆಹಲಿ ಗಲಭೆ: ಯುಎಪಿಎ ಪ್ರಕರಣದಲ್ಲಿ ಉಮರ್ ಖಾಲಿದ್‌ಗೆ ಜಾಮೀನು ನಿರಾಕರಿಸಿದ ಕೋರ್ಟ್‌

ನವದೆಹಲಿ: ಐಪಿಸಿ ಮತ್ತು ಯುಎಪಿಎ ಅಡಿಯಲ್ಲಿ ಆರೋಪಗಳನ್ನು ಒಳಗೊಂಡಿರುವ ದೆಹಲಿ ಗಲಭೆಯ ದೊಡ್ಡ ಪಿತೂರಿ ಪ್ರಕರಣದಲ್ಲಿ ಉಮರ್ ಖಾಲಿದ್‌ಗೆ ಕರ್ಕರ್ಡೂಮಾ ನ್ಯಾಯಾಲಯ ಗುರುವಾರ ಜಾಮೀನು ನಿರಾಕರಿಸಿದೆ.
ಕಡ್‌ಕಡ್‌ಡೂಮ ನ್ಯಾಯಾಲಯ ಮಾರ್ಚ್ 3 ರಂದು ಆದೇಶವನ್ನು ಕಾಯ್ದಿರಿಸಿತ್ತು. ನಂತರ ಆದೇಶ ನೀಡುವುದನ್ನು ಮೂರು ಬಾರಿ (ಮಾರ್ಚ್ 14, 21 ಮತ್ತು 23 ರಂದು) ಮುಂದೂಡಲಾಗಿತ್ತು. ಜಾಮೀನು ಅರ್ಜಿ ವಿಚಾರಣೆ ಸುಮಾರು ಎಂಟು ತಿಂಗಳುಗಳ ಕಾಲ ನಡೆದಿತ್ತು.

2020 ರಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್‌ಯುಎಸ್‌ಯು) ಮಾಜಿ ಸದಸ್ಯ ಉಮರ್ ಖಾಲಿದ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಸಿಎಎ/ಎನ್‌ಆರ್‌ಸಿ ವಿರುದ್ಧ ವ್ಯಾಪಕ ಪ್ರತಿಭಟನೆಯ ನಂತರ 72 ಗಂಟೆಗಳ ಕಾಲ ನಡೆದ ಹಿಂಸಾಚಾರ 53 ಜನರು ಮೃತಪಟ್ಟಿದ್ದರು ಮತ್ತು 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಅದೇ ವರ್ಷ ನವೆಂಬರ್ 22 ರಂದು ಯುಎಪಿಎ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು.. ಖಾಲಿದ್ ಜುಲೈ 2021ರಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಅನೇಕ ದಿನಗಳ ಕಾಲ ನಡೆದ ವಿಚಾರಣೆ ನಂತರ, ನ್ಯಾಯಾಲಯ ಈ ತಿಂಗಳ ಆರಂಭದಲ್ಲಿ ಆದೇಶ ಕಾಯ್ದಿರಿಸಿತ್ತು.

ಪ್ರಮುಖ ಸುದ್ದಿ :-   ವಿಶ್ವದಾದ್ಯಂತ ಕೋವಿಡ್ ಲಸಿಕೆ ಹಿಂತೆಗೆದುಕೊಂಡ ಆಸ್ಟ್ರಾಜೆನೆಕಾ : ವರದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement